ರಾಜ್ಯದ ಹಲವೆಡೆ BJPಯಿಂದ ಜೈಲ್‌ ಭರೋ : ಶೋಭಾ ಕರಂದ್ಲಾಜೆ ಬಂಧನ

ಬೆಂಗಳೂರು : ಬಿಜೆಪಿ ಹಾಗೂ ಆರ್‌ಎಸ್ಎಸ್ ಸಂಘಟನೆಯನ್ನು ಕಾಂಗ್ರೆಸ್‌ ಉಗ್ರ ಸಂಘಟನೆಗೆ ಹೋಲಿಸಿರುವ ಹಿನ್ನೆಲೆಯಲ್ಲಿ ಕಲಬುರ್ಗಿ , ಹಾಸನ ಸೇರಿದಂತೆ ರಾಜ್ಯದ ಹಲವೆಡೆ ಇಂದು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ.
ಕಲಬುರ್ಗಿಯಲ್ಲಿ 200ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ರಾಜ್ಯ ಘಟಕ ನೀಡಿದ ಜೈಲ್‌ ಭರೋ ಆಂದೋಲನದ ಅಂಗವಾಗಿ ಕಾಂಗ್ರೆಸ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದು, ಸಿದ್ದರಾಮಯ್ಯ ಭ್ರಷ್ಟ ಮುಖ್ಯಮಂತ್ರಿ ಎಂಬ ಕೂಗು ಎಲ್ಲೆಡೆ ಕೇಳಿಬರುತ್ತಿತ್ತು.
 ಇನ್ನು ಹಾಸನದಲ್ಲೂ ಬಿಜೆಪಿ ಅಧ್ಯಕ್, ಯೋಗ ರಮೇಶ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕುವ ಯತ್ನ ನಡೆಸಿದ್ದರು.
ಇನ್ನು ತುಮಕೂರಿನಲ್ಲೂ ಸರ್ಕಾರದ ವಿರುದ್ದದ ಕೂಗು ಜೋರಾಗಿತ್ತು. ತುಮಕೂರಿನಲ್ಲಿ ಶೋಭಾ ಕರಂದ್ಲಾಜೆ ಪ್ರತಿಭಟನೆಯ ನೇತೃತ್ವ ವಹಿಸಿದ್ದು. ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಹೋಗಾದ ಪೊಲೀಸರು ಅವರನ್ನು ಬಂಧಿಸಿದರು.
 ಇನ್ನ ಸಿಎಂ ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌ ಹೇಳಿಕೆ ಖಂಡಿಸಿ ಮಡಕೇರಿ, ಚಿಕ್ಕಮಗಳೂರು, ಮಂಗಳೂರು ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಸಲಾಗಿದೆ

Leave a Reply

Your email address will not be published.

Social Media Auto Publish Powered By : XYZScripts.com