ಗ್ರೇಟಾ ಥನ್ಬರ್ಗ್ “ಟೂಲ್ಕಿಟ್” ಪ್ರಕರಣ : ಬೆಂಗಳೂರಿನ ಯುವ ಹೋರಾಟಗಾರ್ತಿ ಬಂಧನ!

ಗ್ರೇಟಾ ಥನ್ಬರ್ಗ್ ಟೂಲ್ಕಿಟ್ ಪ್ರಕರಣದಲ್ಲಿ ಬೆಂಗಳೂರ ಯುವ ಹೋರಾಟಗಾರ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ರೈತರ ಪ್ರತಿಭಟನೆಗೆ ಬೆಂಬಲ ತೋರಿಸಲು ಹದಿಹರೆಯದ ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಮತ್ತು ಇತರರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಟೂಲ್‌ಕಿಟ್ಗೆ ಸಂಬಂಧಿಸಿದಂತೆ ಬೆಂಗಳೂರಿನ 21 ವರ್ಷದ ಯುವ ಹೋರಾಟಗಾರ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತಳನ್ನು 21 ವರ್ಷದ ದಿಶಾ ರವಿ ಎನ್ನಲಾಗಿದೆ. ಈಕೆ ನಗರದ ಉನ್ನತ ಮಹಿಳಾ ಕಾಲೇಜಿನಲ್ಲಿ ಒಂದಾದ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿ. ಫ್ರೈಡೇ ಫಾರ್ ಫ್ಯೂಚರ್ ಅಭಿಯಾನದ ಸ್ಥಾಪಕರಲ್ಲಿ ಒಬ್ಬರು. ಇವಳು ಟೂಲ್ಕಿಟ್ ತಯಾರಿಸಿ ಅದನ್ನು ಮುಂದೆ ಕಳುಹಿಸಿದ್ದಾಳೆ ಎಂದು ಆರೋಪಿಸಲಾಗಿದೆ.

ದಿಶಾ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾಳೆ. ಈಕೆಯ ತಂದೆ ಮೈಸೂರಿನಲ್ಲಿ ಅಥ್ಲೆಟಿಕ್ಸ್ ಕೋಚ್ ಆಗಿದ್ದು ತಾಯಿ ಗೃಹಹಿಣಿಯಾಗಿದ್ದಾರೆ. ಪ್ರತಿಭಟನೆ ಬೆಂಬಲ  ನೀಡಲು ಟೂಲ್ ಕಿಟ್ ಸೃಷ್ಟಿಸಿ ಪಡೆದ ಆರೋಪ ದಿಶಾ ಮೇಲಿದೆ.

ಈ ಡಾಕ್ಯುಮೆಂಟ್ ಪ್ರಕಟವಾದ ಬಳಿಕ ದೆಹಲಿ ಪೊಲೀಸರು ಐಪಿಸಿ ಸೆಕ್ಷನ್ 124ಎ,153ಎ ಅಡಿ ಎಫ್ಐಆರ್ ದಾಖಲಿಸಿದ್ದರು. ಬಳಿಕ ಗೂಗಲ್ ಕಂಪನಿಗೆ ಪತ್ರ ಬರೆದು ಟೂಲ್ ಕಿಟ್ ಬಗ್ಗೆ ಮತ್ತಷ್ಟು ಮಾಹಿತಿ ನೀಡುವಂತೆ ಕೋರಿದ್ದರು. ಗೂಗಲ್ ತನಿಖೆಗೆ ಸಂಬಂಧಿಸಿದ ಮಾಹಿತಿ ನೀಡುವುದಾಗಿ ತಿಳಿಸಿತ್ತು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights