ಅಂಬೇಡ್ಕರ್‌ ಭವನ ಉದ್ಘಾಟನೆ: ಚನ್ನಪಟ್ಟಣದಲ್ಲಿ ಹೆಚ್‌ಡಿಕೆ-ಸಿಪಿವೈ ಬೆಂಬಲಿಗರ ನಡುವೆ ತಿಕ್ಕಾಟ!

ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂಬೇಡ್ಕರ್ ಭವನ ಉದ್ಘಾಟನಾ ಕಾರ್ಯಕ್ರಮವು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮತ್ತು ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ಬೆಂಬಲಿಗರ ನಡುವಿನ ತಿಕ್ಕಾಟಕ್ಕೆ ಕಾರಣವಾಗಿದೆ. ಅಂಬೇಡ್ಕರ್‌ ಭವನವನ್ನು ಉದ್ಘಾಟಿಸಿಲು ಸಿಪಿವೈ ಬೆಂಬಲಿಗರು ಅಡ್ಡಿಪಡಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕಳೆದ 17 ವರ್ಷಗಳಿಂದ ಕುಂಟುತ್ತಾ ಸಾಗಿದ್ದ ಅಂಬೇಡ್ಕರ್​ ಭವನ ನಿರ್ಮಾಣವು ಹೆಚ್​.ಡಿ.ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದ ಶಾಸಕರಾಗಿ ಚುನಾಯಿತರಾದ ಬಳಿಕ ಭವನದ ಕಾಮಗಾರಿ ಪೂರ್ಣಗೊಂಡಿದ್ದು, ನಾಳೆ (ಜನವರಿ 22) ಉದ್ಘಾಟನೆಯಾಗಲಿದೆ.

ನಾಳೆ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಂಬೇಡ್ಕರ್​ ಭವನವನ್ನು ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೆಚ್​ಡಿಕೆ ವಹಿಸಲಿದ್ದಾರೆ.

ಆದರೆ, ಭವನ ಕಾಮಗಾರಿ ಪೂರ್ಣವಾಗಿಲ್ಲ. ಹಾಗಾಗಿ ಭವನ ಉದ್ಘಾಟನೆ ಮಾಡಬಾರದು ಎಂದು ಸಿ.ಪಿ.ಯೋಗೇಶ್ವರ್ ಬೆಂಬಲಿಗರ ಪಟ್ಟು ಹಿಡಿದಿದ್ದಾರೆ. ಇತ್ತ, ಭವನ ಕಾಮಗಾರಿ ಪೂರ್ಣವಾಗಿದೆ ಎಂದು ಜೆಡಿಎಸ್ ಮುಖಂಡರು ವಾದಿಸುತ್ತಿದ್ದಾರೆ.

ಭವನ ಉದ್ಘಾಟನೆ ಮಾಡಿದರೆ ಹೋರಾಟ ನಡೆಸುತ್ತೇವೆ ಎಂದು ಸಿಪಿವೈ ಬೆಂಬಲಿಗರು ಹೇಳಿದ್ದಾರೆ. ಇದೆಲ್ಲದರ ನಡುವೆ ಭವನದ ಉದ್ಘಾಟನೆಗೆ ಸಿದ್ದತೆಗಳು ನಡೆಯುತ್ತಿವೆ.

ಇದನ್ನೂ ಓದಿ: ಸಿದ್ದರಾಮಯ್ಯ-ಡಿಕೆಶಿ ನಿರುದ್ಯೋಗಿಗಳು; ಅದಕ್ಕೆ ಪ್ರತಿಭಟನೆ ಮಾಡ್ತಿದ್ದಾರೆ: ಸಚಿವ ಆರ್.ಅಶೋಕ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights