ಚಿತ್ರದುರ್ಗ: ಬಾಲಕಿಯ ಕೈ-ಕಾಲು ಕಟ್ಟಿ ಅತ್ಯಾಚಾರ ಎಸಗಿದ ಕಾಮುಕನ ಬಂಧನ

ಕಾಮುಕನೊಬ್ಬ ಅಪ್ರಾಪ್ತ ಬಾಲಕಿಯೊಬ್ಬಳ ಕೈ-ಕಾಲು ಕಟ್ಟಿ, ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ವಿವೇಕಾನಂದ ನಗರದ ಆರೋಪಿ ಮೂಡ್ಲಪ್ಪ ಎಂಬಾತ ಕೃತ್ಯ ಎಸಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವೆಂಬರ್​19 ರಂದು ಬಟ್ಟೆ ತೊಳೆಯಲು ಹೊರಟಿದ್ದ ಬಾಲಕಿಯನ್ನು ಪುಸಲಾಯಿಸಿ, ಗುಡ್ಡದ ಮೇಲೆ ಎಳೆದೊಯ್ದ ಆರೋಪಿ, ಆಕೆಯ ಕೈ-ಕಾಲು ಕಟ್ಟಿಹಾಕಿ ಅತ್ಯಾಚಾರ ಎಸಗಿದ್ದಾನೆ. ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ಎರಡು ದಿನಗಳ ಬಳಿಕ ಬಾಲಕಿ, ತನ್ನ ಮೇಲಾದ ದೌರ್ಜನ್ಯದ ಬಗ್ಗೆ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಾಳೆ. ನಂತರ, ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು 35 ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ದೆಹಲಿ-ಬೆಂಗಳೂರು ರೈಲಿನಲ್ಲಿ ಬಾಂಬ್ ಇರುವ ಬಗ್ಗೆ ಹುಸಿ ಕರೆ; 12 ಗಂಟೆಗಳ ನಿರಂತರ ಶೋಧ; ಬೆಂಗಳೂರು ತಲುಪಿದ ರೈಲು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights