ಧಾರವಾಡ: ಎಸ್‍ಡಿಎಂ ಕಾಲೇಜಿನಲ್ಲಿ ಕೊರೊನಾ ಆಕ್ರಮಣ; ಸೋಂಕಿತರ ಸಂಖ್ಯೆ 282ಕ್ಕೆ ಏರಿಕೆ

ಧಾರವಾಡದ ಎಸ್‍ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸೋಂಕಿನ ಆಕ್ರಮಣ ಹೆಚ್ಚಾಗಿದೆ. ಶುಕ್ರವಾರ ಹೊಸದಾಗಿ 77 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದಾಗಿ ದೃಢಪಟ್ಟಿದೆ. ಈ ಮೂಲಕ ಕಾಲೇಜಿನಲ್ಲಿ ಸೋಂಕಿತರ ಸಂಖ್ಯೆ 282ಕ್ಕೆ ಏರಿಕೆಯಾಗಿದೆ. ಹೀಗಾಗಿ, ಕಾಲೇಜು ಮತ್ತು ಹಾಸ್ಟಲ್‌ಗಳನ್ನು ಸೀಲ್‌ಡೌನ್‌ ಮಾಡಲಾಗಿದೆ.

ಬುಧವಾರ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳನ್ನೂ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ ಗುರುವಾರ 161 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿತ್ತು. ಇದೀಗ, ಶುಕ್ರವಾರವೂ 77 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೂವರೆಗೂ ಕಾಲೇಜಿನ 282 ವಿದ್ಯಾರ್ಥಿಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದು, ಪೋಷಕರಲ್ಲಿ ಆತಂಕ ಮನೆ ಮಾಡಿದೆ.

ವಿದ್ಯಾರ್ಥಿಗಳಲ್ಲಿ ಪತ್ತೆಯಾಗಿರುವ ಈ ರೂಪಾಂತರಿ ಸೋಂಕು ಹೆಚ್ಚು ಪರಿಣಾಮಕಾರಿಯಲ್ಲ. ಸೋಂಕಿತ ಎಲ್ಲಾ ವಿದ್ಯಾರ್ಥಿಗಳಿಗೂ ಸೂಕ್ತ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಈ ವಿದ್ಯಾರ್ಥಿಗಳ ಜೊತೆಗಿದ್ದ ಎಲ್ಲರನ್ನೂ ಕ್ವಾರಂಟೈನ್‌ನಲ್ಲಿ ಇರಲು ಸೂಚಿಸಲಾಗಿದೆ. ಹೀಗಾಗಿ, ಆತಂಕ ಪಡುವ ಅಗತ್ಯವಿಲ್ಲ ಎಂದು ಧಾರವಾಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ, ಕಳೆದ ವಾರ ಮೊದಲ ಬಾರಿಗೆ ಅತೀ ಕಡಿಮೆ ಸೋಂಕಿತ ಪ್ರಕರಣಗಳ ಸಂಖ್ಯೆ ವರದಿಯಾಗಿತ್ತು. ಅಲ್ಲದೆ, ಭಾರತಕ್ಕೆ ಕೊರೊನಾ 3ನೇ ಅಲೆ ಅಪ್ಪಳಿಸುವ ಸಾಧ್ಯತೆ ಇಲ್ಲ ಎಂದು ದೆಹಲಿ ಏಮ್ಸ್‌ ಆಸ್ಪತ್ರೆಯ ನಿರ್ದೇಶಕರು ಹೇಳಿದ್ದರು. ಹೀಗಾಗಿ, ಜನರು ನಿರಾಳರಾಗಿದ್ದರು. ಆದರೆ, ಧಾರವಾಡ ಕಾಲೇಜಿನಲ್ಲಿ ಕೊರೊನಾ ಉಲ್ಬಣಗೊಂಡಿರುವುದು ಮತ್ತು ಶುಕ್ರವಾರ ರಾಜ್ಯದಲ್ಲಿ ಸೋಂಕಿತರ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆ ಕಂಡಿದೆ. ಇದು 3ನೇ ಅಲೆಯ ಮುನ್ಸೂಚನೆಯೇ ಎಂದು ಜನರು ಆತಂಕಗೊಂಡಿದ್ದಾರೆ.

ಇದನ್ನೂ ಓದಿ: ACB ದಾಳಿ: ಮನೆಯ ಪೈಪ್‌ನಲ್ಲಿ ನೋಟಿನ ಕಂತೆ ಇಟ್ಟು ಜೈಲು ಸೇರಿದ ಸರ್ಕಾರಿ ಎಂಜಿನಿಯರ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights