ಗ್ರಾಮ ಪಂ. ಮತ ಎಣಿಕೆ ಸಂದರ್ಭದಲ್ಲಿ ಹೃದಯಾಘಾತ; ಚುನಾವಣಾ ಅಧಿಕಾರಿ ಸಾವು!

ಗ್ರಾಮ ಪಂಚಾಯತಿಗೆ ನಡೆದ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಪುಷ್ಪ ಕಾನ್ವೆಂಟ್ ಮತ ಎಣಿಕೆ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಚುನಾವಣಾ ಅಧಿಕಾರಿಗೆ ಹೃದಯಾಘಾತ ಸಂಭವಿಸಿದ್ದು, ಅವರು ಸಾವನ್ನಪ್ಪಿದ್ದಾರೆ.

ಪಿರಿಯಾಪಟ್ಟಣ ತಾಲ್ಲೂಕಿನ ವ್ಯಾಪ್ತಿಯ ಗ್ರಾಮ ಪಂಚಾಯತ್​ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದ ವೇಳೆ ಅವರಿಗೆ ಮೊದಲು ಎದೆ ನೋವು ಕಾಣಿಸಿಕೊಂಡಿದೆ. ಆದರೆ, ಆಸ್ಪತ್ರೆಗೆ ಸಾಗಿಸುವಾದ ಮಾರ್ಗಮಧ್ಯೆಯೆ ಬೋರೆಗೌಡ ಮೃತರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.‌

ಮೂಲತಃ ಲೋಕೋಪಯೋಗಿ ಇಲಾಖೆ ಎಇಇ ಆಗಿದ್ದ ಬೋರೆಗೌಡ ಅವರು, ಎನ್.ಶೆಟ್ಟಹಳ್ಳಿ ಗ್ರಾ.ಪಂ ಚುನಾವಣಾ ಅಧಿಕಾರಿಯಾಗಿ ನೇಮಕವಾಗಿದ್ದರು.

ಪ್ರಸ್ತುತ ಮಾಹಿತಿಯ ಪ್ರಕಾರ ಕರ್ನಾಟಕದ 5,728 ಗ್ರಾಮ ಪಂಚಾಯಿತಿಗಳಿಗೆ ಮತ ಎಣಿಕೆ ಪ್ರಾರಂಭವಾಗಿದೆ. ಇವಿಎಂಗಳನ್ನು ಬಳಸಿದ ಬೀದರ್ ಜಿಲ್ಲೆಯನ್ನು ಹೊರತುಪಡಿಸಿ ಮತದಾನದಲ್ಲಿ ಮತಪತ್ರಗಳನ್ನು ಬಳಸಲಾಗಿದೆ. ಹಾಗಾಗಿ ಫಲಿತಾಂಶಗಳ ಪ್ರಕಟಣೆ ವಿಳಂಬವಾಗಬಹುದು ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಗ್ರಾಮ ಪಂ. ಚುನಾವಣಾ ಮತ ಎಣಿಕೆ ಆರಂಭ; ಯಾರಿಗೆ ಸಿಗಲಿದೆ ಸ್ಥಳೀಯ ಸಂಸ್ಥೆಗಳ ಗದ್ದುಗೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights