ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ: ಸೆಲೆಬ್ರಿಟಿಗಳನ್ನು ಕರೆತರುವ ಜವಾಬ್ದಾರಿ ಸಾಧು ಕೋಕಿಲಾಗೆ!

ಮೇಕೆದಾಟು ಯೋಜನೆಯನ್ನು ಜಾರಿಗೆ ತರುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷವು ಜನವರಿ 9ರಿಂದ ಬೃಹತ್ ಪಾದಯಾತ್ರೆಗೆ ನಡೆಸುತ್ತಿದೆ. ಇದಕ್ಕಾಗಿ, ನಾಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ಕುರಿತ ಪೂರ್ವಭಾವಿ ಸಭೆ ನಡೆಯಲಿದ್ದು, ಅಂತಿಮ ರೂಪುರೇಷೆ ಸಿದ್ಧವಾಗಲಿದೆ.

ಮೇಕೆದಾಟು ಪಾದಯಾತ್ರೆಗೆ ಈ ಬಾರಿ ಕನ್ನಡ ಚಿತ್ರರಂಗ ನಟ-ನಟಿಯರು ಕೂಡ ಪಾಲ್ಗೊಳ್ಳುವ ನಿರೀಕ್ಷೆ ಇದೆ. ನಟ, ಸಂಗೀತ ಸಂಯೋಜಕ ಸಾಧು ಕೋಕಿಲಾ ಅವರಿಗೆ ಪಾದಯಾತ್ರೆಗೆ ಸೆಲೆಬ್ರಿಟಿಗಳನ್ನು ಕರೆತರುವ ಜವಾಬ್ದಾರಿಯನ್ನು ಕಾಂಗ್ರೆಸ್ ವಹಿಸಿದೆ.

2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರಾಗಿದ್ದ ಸಾಧು ಕೋಕಿಲಾ ಅವರಿಗೆ ಈ ಬಾರಿ ಮಹತ್ವದ ಜವಾಬ್ದಾರಿ ನೀಡಲಾಗಿದ್ದು, ಪಾದಯಾತ್ರೆಗೆ ಇಡೀ ಕನ್ನಡ ಚಿತ್ರರಂಗವೇ ಬೆಂಬಲ ನಿಡುವುದು ಬಹುತೇಕ ಖಚಿತವಾಗಿದೆ.

ಪರಿಷತ್ ಚುನಾವಣೆ ಫಲಿತಾಂಶದ ನಿರೀಕ್ಷೆ ಬೆನ್ನಲ್ಲೇ ಮೇಕೆದಾಟು ಪಾದಯಾತ್ರೆ ಮೂಲಕ ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದಂತಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights