ದುರ್ಗಾದೇವಿ ವಿಗ್ರಹ ವಿಸರ್ಜನೆ ವೇಳೆ ಆಘಾತ; ನೀರಿನಲ್ಲಿ ಮುಳುಗಿ ನಾಲ್ವರ ಸಾವು!

ದುರ್ಗಾದೇವಿ ವಿಗ್ರಹ ವಿಸರ್ಜನೆಗೆ ತೆರಳಿದ್ದ ಸಂದರ್ಭದಲ್ಲಿ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ಭೂತೇಶ್ವರ ದೇವಾಲಯದ ಸಮೀಪದಲ್ಲಿರುವ ಪಾರ್ವತಿ ನದಿಯಲ್ಲಿ ದುರ್ಗಾದೇವಿಯ ವಿಗ್ರಹವನ್ನು ವಿಸರ್ಜನೆ ಮಾಡಲು ಯುವಕರು ತೆರಳಿದ್ದರು. ಈ ವೇಳೆ ನಾಲ್ವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟವರನ್ನು ಆಗ್ರಾ ಮೂಲದವರಾಗಿದ್ದಾರೆ. ಅವರನ್ನು ಜಯಪ್ರಕಾಶ್ (22), ಶ್ರೀಕೃಷ್ಣ (23), ರಾಜೇಶ್ (26) ಹಾಗೂ ರಣವೀರ್ ಸಿಂಗ್ (24) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹಗಳನ್ನು ಕುಟುಂಬಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ನಾನೇ ಪೂರ್ಣಾವಧಿ ಮುಖ್ಯಸ್ಥೆ: ಜಿ-23 ನಾಯಕರಿಗೆ ಸೋನಿಯಾ ಗಾಂಧಿ ಖಡಕ್‌ ಉತ್ತರ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights