‘ಕುರುಕ್ಷೇತ್ರ’ ಚಿತ್ರದ ಸಂಭಾವನೆ ನೆರೆಯ ಸಂತ್ರಸ್ಥರಿಗೆ ನೀಡುವುದಾಗಿ ಘೋಷಿಣೆ…

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅತಿವೃಷ್ಟಿಯಿಂದ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.

ಹುಬ್ಬಳ್ಳಿಯ ದೇವಿನಗರ, ಭೈರಿದೇವರಕೊಪ್ಪ, ಉಣಕಲ್ ಮೊದಲಾದ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಕುರುಕ್ಷೇತ್ರ’ ಚಿತ್ರದ ಸಂಭಾವನೆಯನ್ನು ಅತಿವೃಷ್ಟಿಯಿಂದ ಸಂಕಷ್ಟಕ್ಕೊಳಗಾಗಿರುವ ಕುಟುಂಬಗಳಿಗೆ ನೀಡುವುದಾಗಿ ಘೋಷಿಸಿದ್ದಾರೆ.

ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಭಾರಿ ನಷ್ಟವಾಗಿದೆ. ಇದನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಅಗತ್ಯವಾದ ಅನುದಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಸಂತ್ರಸ್ತರಿಗೆ ನೆರವಾಗುವ ಉದ್ದೇಶದಿಂದ ಜೆಡಿಎಸ್ ರಾಜ್ಯ ಘಟಕದ ವತಿಯಿಂದ ಅಗತ್ಯ ವಸ್ತುಗಳ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.