ಚಂದನ್ ಶೆಟ್ಟಿಗೆ ವಾರ್ನಿಂಗ್ ಕೊಟ್ಟ ಎಸ್‌ಪಿ ರಿಶ್ಯಂತ್…!

ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ನಿವೇದಿತಾಗೆ ಪ್ರಫೋಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದನ್ ಶೆಟ್ಟಿಗೆ ಎಸ್‌ಪಿ ರಿಶ್ಯಂತ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಈ ರೀತಿ ವರ್ತನೆ ಮರುಕಳಿಸಿದರೆ ಸರ್ಕಾರಿ ಕಾರ್ಯಕ್ರಮದಿಂದ ನಿಮ್ಮನ್ನು ಬ್ಯಾನ್ ಮಾಡುತ್ತೇವೆ. ಚಂದನ್ ಶೆಟ್ಟಿ ಮಾತ್ರವಲ್ಲ ಸರ್ಕಾರಿ ವೇದಿಕೆಯನ್ನು ಖಾಸಗಿ ಕ್ಷಣಕ್ಕೆ ಬಳಸಿಕೊಳ್ಳುವ ಎಲ್ಲಾ ಕಲಾವಿದರಿಗು ಎಚ್ಚರಿಕೆ ನೀಡಿದ್ದಾರೆ.
ಚಂದನ್‌ಶೆಟ್ಟಿ ಸ್ಪಷ್ಟೀಕರಣ ಬಗ್ಗೆ ಮಾಹಿತಿ ನೀಡಿದ ಎಸ್ಪಿ ರಿಷ್ಯಂತ್. ಪ್ರಕರಣದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಬಿಟ್ಟಿದ್ದೇವೆ. ಜಿಲ್ಲಾಧಿಕಾರಿಗಳು ಎಲ್ಲವನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಎಸ್‌ಪಿ ರಿಶ್ಯಂತ್  ಹೇಳಿದ್ದಾರೆ.

ಪ್ರಕರಣದ ಬಗ್ಗೆ ಮೈಸೂರು ಎಸ್‌ಪಿಗೆ ವಿವರಣೆ ಕೊಟ್ಟ ಚಂದನ್ ಶೆಟ್ಟಿ,  ಜನರ ಮುಂದೆ ಅಟ್ರಾಕ್ಟ್ ಮಾಡಲು ಈ ರೀತಿ ನಡೆದುಕೊಂಡೆ. ಅದನ್ನ ಬಿಟ್ಟರೆ ಬೇರೆ ಉದ್ದೇಶ ಇಲ್ಲ ಎಂದು ಉತ್ತರಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.