ಚಾಕು ಇರಿತಕ್ಕೆ ಒಳಗಾದ ತನ್ವೀರ್ ಸೇಠ್ ಸ್ಥಿತಿ ಗಂಭೀರ : ಕೊಲೆಗೆ ಯತ್ನಿಸಿದ ಆರೋಪಿ ಬಿಚ್ಚಿಟ್ಟ ರಹಸ್ಯ

ಪಾರ್ಹಾನ್ ಪಾಷಾ ಎಂಬಾತನಿಂದ ಕೊಲೆ ಯತ್ನಕ್ಕೆ ಒಳಗಾದ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರು ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಸ್ಥಿತಿ ಗಂಭೀರವಾಘಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಚಾಕು ಇರಿತಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿರುವ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್​ ಆರೋಗ್ಯ ಸ್ಥಿತಿ ಗಂಭಿರವಾಗಿದ್ದು, 48 ಗಂಟೆ ಏನನ್ನೂ ಹೇಳಲಾಗುವುದಿಲ್ಲ. ಆದರೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ಮುಖ್ಯಸ್ಥ ಡಾ.ಉಪೇಂದ್ರ ಶೆಣೈ ಹೇಳಿದ್ದಾರೆ.

ಇಂದು ಬೆಳಗ್ಗೆ ಕೊಲಂಬಿಯಾ ಏಷಿಯಾ ಆಸ್ಪತ್ರೆ ತನ್ವೀರ್​ ಸೇಠ್​ ಆರೋಗ್ಯದ ಕುರಿತು ಬುಲೆಟಿನ್​ ಬಿಡುಗಡೆ ಮಾಡಿದೆ. “ತನ್ವೀರ್ ಕುತ್ತಿಗೆ ಭಾಗದಲ್ಲಿ ಗಾಯವಾಗಿದ್ದು, ಮೆದುಳು ಹಾಗೂ ಹೃದಯಕ್ಕೆ ಸಂಬಂಧಿಸಿದ ರಕ್ತನಾಳಗಳಿಗೆ ಹಾನಿ ಉಂಟಾಗಿದೆ. ಹಾಗಾಗಿ ಅವರ ಅರೋಗ್ಯ ಸ್ಥಿತಿ ಗಂಭೀರವಾಗಿದೆ. ಇನ್ನು, 48 ಗಂಟೆ ಕಾಲ ಏನನ್ನೂ  ಹೇಳಲಾಗುವುದಿಲ್ಲ,” ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನೂ ಪೊಲೀಸ್ ವಶದಲ್ಲಿರುವ ಆರೋಪಿ ಪಾರ್ಹಾನ್ ಪಾಷಾ ಕೊಲೆಯ ರಹಸ್ಯೆ ಬಿಚ್ಚಿಟ್ಟಿದ್ದಾನೆ. ಈತ ಐವರ ಹೆಸರನ್ನ ಹೇಳಿದ್ದು, ಪೊಲೀಸರು ಆ ಐವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿಗಳ ವಿಚಾರಣೆ ಬಳಿಕ ಇನ್ನಷ್ಟು ವಿಚಾರಗಳು ಹೊರಬೀಳಲಿವೆ.

 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.