ಜ್ಯೂಸ್ ಅಂತ ತಿಳಿದು ಕಳೆನಾಶಕ ಕುಡಿದು ಮಗು ಸಾವು….!

ಜ್ಯೂಸ್ ಅಂತ ತಿಳಿದು ಕಳೆನಾಶಕ ಕುಡಿದು ಮಗು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ನಡೆದಿದೆ.

ಅಗಸ್ತ್ಯ (3) ಸಾವನ್ನಪ್ಪಿದ್ದ ನತದೃಷ್ಟ ಮಗು. ಪ್ರವೀಣ್-ಪೂಜಿತ ದಂಪತಿಯ ಏಕೈಕ ಪುತ್ರ ಅಗಸ್ತ್ಯ. ಅಕ್ಟೋಬರ್ 24ರಂದು ಕಳೆನಾಶಕ ಸೇವಿಸಿದ್ದ ಅಗಸ್ತ್ಯ, ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

18 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಮಗು ಸಾವನ್ನಪ್ಪಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.