ಟ್ವೀಟ್ ಮೂಲಕ ಸಂಸದೆ ಶೋಭಾ ಕರಂದ್ಲಾಜೆಗೆ ಟಾಂಗ್ ಕೊಟ್ಟ ಎಚ್ಡಿಕೆ….

ಟ್ವೀಟ್ ಮೂಲಕ ಸಂಸದೆ ಶೋಭಾ ಕರಂದ್ಲಾಜೆಗೆ ಮಾಜಿ ಸಿಎಂ ಎಚ್ಡಿಕೆ ಟಾಂಗ್ ಕೊಟ್ಟಿದ್ದಾರೆ.

ಕುಮಾರಸ್ವಾಮಿ ಆಲೂಗಡ್ಡೆಯಿಂದ ಶ್ರೀಮಂತರಾದವರು ಎಂದ ಸಂಸದೆ ಶೋಭಾ ನಡೆಗೆ ಎಚ್ಡಿಕೆ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಲೆನಾಡಲ್ಲಿ ಪ್ರವಾಹದಿಂದ ಒಂದು ಸಾವಿರ ಕುಟುಂಬಗಳು ಬೀದಿ ಪಾಲಾಗಿವೆ. ರೈತರ ಸ್ಥಿತಿ ಡೋಲಾಯಮಾನವಾಗಿದೆ. ಪರಿಹಾರ ಸಿಗದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡುವ ಬದಲು, ಕ್ಷೇತ್ರದಿಂದ ಕಾಲ್ಕಿತ್ತಿದ್ದಾರೆ ಸಂಸದರು. ಈ ಸಂದರ್ಭದಲ್ಲಿ ಅವರ ಕಷ್ಟಕ್ಕೆ ಇರದ ಸಂಸದರು ಕ್ಷೇತ್ರದಿಂದ ಕಾಲ್ಕಿತ್ತಿದ್ದಾರೆ. ಇದು ಸಂಸದರ “ರೈತ ಪರ ಕಾಳಜಿಯನ್ನು”ತೋರಿಸುತ್ತದೆ ಎಂದು ಟ್ವೀಟ್ ಮೂಲಕ ಸಂಸದೆ ಶೋಭಾ ಕರಂದ್ಲಾಜೆಗೆ ಟಾಂಗ್ ಕೊಟ್ಟ ಎಚ್ಡಿಕೆ

ಮೈಸೂರಿನ ದಸರಾದಲ್ಲಿ ತೊಡಗಿಕೊಂಡಿರುವ ಸಂಸದೆ ಶೋಭಾರಿಗೆ ರೈತರು ಸಾಯುತ್ತಿದ್ದರು ಅವರ ಕ್ಷೇತ್ರ ನಿರ್ಲಕ್ಷಕ್ಕೆ ಹೆಚ್ಡಿಕೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.