ಡಿಕೆಶಿ ಅರೆಸ್ಟ್ : ಹೆಚ್ಚಿದ ‘ಕೈ’ ಕಿಚ್ಚು – ಕಾಂಗ್ರೆಸ್ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಕಿಡಿ….

ಕಾಂಗ್ರೆಸ್ ಜನರ ಸಿಂಪಥಿಯನ್ನು ಕಳೆದುಕೊಂಡು ಈ ಮಟ್ಟಕ್ಕೆ ಇಳಿದಿದೆ. ಇಂತದ್ದನ್ನು ಮಾಡಿ-ಮಾಡಿಯೇ ಅವರು ಜನರ ಸಿಂಪಥಿಯನ್ನು ಕಳೆದುಕೊಂಡಿರೋದು. ಇಂದು ಕಾಂಗ್ರೆಸ್ಸಿನ ನಾಯಕರ ಮೇಲೆ ಜನರಿಗೆ ಸಿಂಪಥಿ ಇಲ್ಲ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಕಾನೂನಿನಂತೆ ಬಂಧನ ಆಗಿರಬಹುದು. ನಿರಂತರವಾದ ಅಧ್ಯಯನ ಹಾಗೂ ತನಿಖೆಯನ್ನು ಸಂಸ್ಥೆಗಳು ಮಾಡಿವೆ. ಅದರ ಆಧಾರದಲ್ಲಿ ಅವರ ಬಂಧನವಾಗಿರಬಹುದು. ದೇಶದ 70 ವರ್ಷದ ಇತಿಹಾಸದಲ್ಲಿ ಇಂತಹ ಹಲವು ಬಂಧನಗಳಾಗಿವೆ. ತನಿಖೆಗಳು ಆಗಿವೆ. ಇಡಿ ಅಥವಾ ಸಿಬಿಐ ಯಾವುದು ಕೂಡ ನಾವು ಹುಟ್ಟು ಹಾಕಿದ್ದಲ್ಲ. ಇವೆಲ್ಲಾ ಹುಟ್ಟು ಹಾಕೋಕೆ ಅವರೇ ಕಾರಣ ಎಂದರು.

ಇಂದು ಕಾಂಗ್ರೆಸ್ ಮಾಡುತ್ತಿರುವ ಹೋರಾಟ ಯಾರ ಪರ ಎಂದು ಅರ್ಥ ಆಗುತ್ತಿಲ್ಲ. ಯಾರ ಪರ ನಿಂತಿದ್ದಾರೆ? ಯಾಕಾಗಿ ನಿಲುತ್ತಾರೆ? ಈ ಹಿಂದೆ ಅವರು ಮಾಡಿದ ಎಲ್ಲಾ ಬಂಧನ ರಾಜಕೀಯ ಪ್ರೇರಿತನಾ? ರಾಜಕೀಯ ಪ್ರೇರಿತವಾಗಿಯೇ ಯುಪಿಎ ಕಾಲದಲ್ಲಿ ಬಂಧನವಾಗಿದೇಯಾ? ಇದಕ್ಕೆಲ್ಲಾ ಕಾಂಗ್ರೆಸ್ ಉತ್ತರ ಕೊಡುವ ಜಾಗದಲ್ಲಿದೆ. ಯಾರು ಪ್ರಶ್ನೆ ಕೇಳುತ್ತಿದ್ದಾರೆ, ಅವರೇ ಉತ್ತರ ಹೇಳಬೇಕು ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.