ಡಿಕೆಶಿ ಬಂಧನ ಖಂಡಿಸಿ ಒಕ್ಕಲಿಗರ ಹೋರಾಟಕ್ಕೆ ಎಚ್ ಡಿ ಕುಮಾರಸ್ವಾಮಿ ಗೈರು….

ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಳ್ಳುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ವಿರೋಧ ಪಕ್ಷಕ್ಕಿಂತ ಮಿತ್ರ ಪಕ್ಷಗಳಲ್ಲೇ ಹೆಚ್ಚು ವೈಮನಸ್ಸು ಕಾಣಿಸಿಕೊಂಡಿದ್ದು ಎಲ್ಲರಿಗೂ ಗೊತ್ತಿರೋ ವಿಚಾರ. ಬದ್ದ ವೈರಿಗಳಾಗಿದ್ದ ಕಾಂಗ್ರೆಸ್ ಮಾಜಿ ಸಚಿವ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಪರಸ್ಪರ ಕೈ ಜೋಡಿಸಿದ್ದು ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಲೇ.. ಆದರೆ ದೋಸ್ತಿ ಸರ್ಕಾರ ಮಕಾಡೆ ಮಲಗುತ್ತಿದ್ದಂತೆ ಪರಸ್ಪರ ಕೆಸರೆರೆಚಾಟ ನಡೆದಿದ್ದರ ಲಾಭ ರಾಜ್ಯ ರಾಜಕೀಯದಲ್ಲಿ ಬಿಜೆಪಿ ಪಡೆದುಕೊಂಡು ಅಧಿಕಾರದ ಚುಕ್ಕಾಣೆ ಹಿಡಿದಿದೆ. ಆದರೆ ಈ ವೈಮಸ್ಸು ಡಿಕೆ ಶಿವಕುಮಾರ್ ಬಂಧನದ ವಿಚಾರದಲ್ಲೂ ಮುಂದುವರೆಯುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.

ಮಾಜಿ ಸಚಿವ ಡಿಕೆ ಶಿವಕುಮಾರ್ ಪರ ಒಕ್ಕಲಿಗರ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಗೈರಾಗುವ ಸಾಧ್ಯತೆಗಳಿವೆ. ಎಚ್ ಡಿಕೆ ಅವರು ತಮ್ಮ ಸ್ವಕ್ಷೇತ್ರಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಪ್ರತಿಭಟನೆಯಲ್ಲಿ ಮಾಜಿ ಸಿಎಂ ಭಾಗವಹಿಸುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಇಂದು ಸಿಲಿಕಾನ್ ಸಿಟಿಯಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಒಕ್ಕಲಿಗರ ಸಮುದಾಯ ಈ ಪ್ರತಿಭಟನೆಯನ್ನು ಆಯೋಜಿಸಿದ್ದು, ಲಕ್ಷಾಂತರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಪೊಲೀಸರು ಭದ್ರತೆ ಒದಗಿಸುತ್ತಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights