ಡಿಕೆ ಶಿವಕುಮಾರ್ ಗೆ ಒಂದು ದಿನ ನ್ಯಾಯಾಂಗ ಬಂಧನ : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಇಂದು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ರಾಮ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ಸಂಜೆ 4 ಗಂಟೆಗೆ  ಇಡಿ ಅಧಿಕಾರಿಗಳು ರೋಸ್ ಅವೆನ್ಯೂ ನ್ಯಾಯಾಲಯ ಸಮುಚ್ಚಯದ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಅಕ್ರಮ ಹಣಕಾಸು ವ್ಯವಹಾರದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಕೋರ್ಟ್ ಒಂದು ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಬೇಕೆಂದು ಡಿಕೆಶಿ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ, ಮುಕುಲ್ ರೋಹ್ಟಗಿ ವಾದ ಮಂಡಿಸಿದ್ದರೆ, ವಿಚಾರಣೆ ಪೂರ್ಣಗೊಂಡಿಲ್ಲ. ಸೆ.13 ರಂದು ನಾವು 4 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದೇವು. ನಮ್ಮ ಕಸ್ಟಡಿಗೆ ನೀಡಿದ್ದರೂ ಶಿವಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದರಿಂದ ವಿಚಾರಣೆ ನಡೆಸಿಲ್ಲ. ಹೀಗಾಗಿ ಜಾಮೀನು ಮಂಜೂರು ಮಾಡಬೇಡಿ ಎಂದು ಇಡಿ ಪರ ವಕೀಲ ಹೆಚ್ಚುವರಿ ಸಾಲಿಸಿಟರ್ ಜನರಲ್ ನಟರಾಜ್ ವಾದಿಸಿದರು. ಅಷ್ಟೇ ಅಲ್ಲದೇ ನನಗೆ ವಾದ ಮಾಡಲು 1 ಗಂಟೆ ಸಮಯ ಬೇಕು ಎಂದು ನಟರಾಜ್ ಮನವಿ ಮಾಡಿದರು.

ಎರಡು ಕಡೆಯ ವಾದ ಆಲಿಸಿದ ನ್ಯಾ. ಅಜಯ್ ಕುಮಾರ್ ಕುಹಾರ್ ಒಂದು ದಿನ ನ್ಯಾಯಾಂಗ ಬಂಧನ ವಿಧಿಸಿ ಬುಧವಾರಕ್ಕೆ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದರು. ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ಅನಾರೋಗ್ಯದಲ್ಲಿರುವ ಡಿಕೆ ಶಿವಕುಮಾರ್ ಮತ್ತೆ ಆರ್‍ಎಂಎಲ್ ಆಸ್ಪತ್ರೆಗೆ ದಾಖಲಾಗಲಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.