ಡಿ.ಕೆ. ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ನಗರಾದ್ಯಂತ ಭಾರೀ ಪ್ರತಿಭಟನೆ ನಡೆಸಲಾಗುತ್ತಿದೆ.

ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಒಕ್ಕಲಿಗರ ಸಂಘ, ಡಿ.ಕೆ. ಶಿವಕುಮಾರ ಅಭಿಮಾನಿಗಳ ಸಂಘ, ಕಾಂಗ್ರೆಸ್ ಪಕ್ಷ ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ಇಂದಿನ ಪ್ರತಿಭಟನೆ ಸಮಾವೇಶದಲ್ಲಿ ಮುಂದಿನ ಹೋರಾಟದ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ.

ರಾಜ್ಯದ ವಿವಿಧ ಕಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನ ಬೆಂಗಳೂರಿನತ್ತ ಆಗಮಿಸಿದ್ದಾರೆ. ಪ್ರತಿಭಟನೆಯಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಹಲವು ಮಾರ್ಗಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದ್ದು, ವಿವಿಧೆಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಎಲ್ಲೆಡೆ ಬಂದೋಬಸ್ತ್ ಕೈಗೊಂಡಿದ್ದು, ಪ್ರತಿಭಟನಾಕಾರರಿಗೆ ಷರತ್ತು ವಿಧಿಸಿದ್ದಾರೆ.

 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.