ತಡರಾತ್ರಿ ಆಸ್ಪತ್ರೆಗೆ ದಾಖಲಾದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ : ಅಭಿಮಾನಿಗಳಲ್ಲಿ ಆತಂಕ

ತಿಹಾರ್ ಜೈಲಿನಿಂದ ಕನಕಪುರ ಬಂಡೆಗೆ ಬಿಗ್ ರಿಲೀಫ್ ಸಿಗುತ್ತಿದ್ದಂತೆ ಈಗ ಅನಾರೋಗ್ಯದ ಚಿಂತೆ ಮನೆ ಮಾಡಿದೆ.

ಹೌದು… ಎದೆ ನೋವು, ಅಧಿಕ ರಕ್ತದೊತ್ತಡ ಹಿನ್ನೆಲೆ ತಡರಾತ್ರಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಧ್ಯರಾತ್ರಿ 1.30 ರ ಸುಮಾರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಶಿವಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ. ಚಿಕಿತ್ಸೆ ವೇಳೆ ಯಾರಿಗೂ ಭೇಟಿಗೆ ಅವಕಾಶ ನೀಡದಿರಲು ಕುಟುಂಬದವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆ ಕೂಡ ಡಿ.ಕೆ. ಶಿವಕುಮಾರ್ ಅಪೋಲೋ ಆಸ್ಪತ್ರೆಗೆ ದಾಖಲಾಗಿ ನಂತರ ಡಿಸ್ಚಾರ್ಜ್ ಆಗಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.