ನೆರೆ ಸಂತ್ರಸ್ತರ ನೆರವಿಗೆ ‘ಪವರ್ ಸ್ಟಾರ್’ : 5 ಲಕ್ಷ ರು. ದೇಣಿಗೆ ಕೊಟ್ಟ ಪುನೀತ್

‘ಪವರ್‌ ಸ್ಟಾರ್‌’ ಪುನೀತ್‌ ರಾಜ್‌ಕುಮಾರ್‌ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ನೆರೆ ಸಂತ್ರಸ್ತರಿಗೆ ನೆರವಾಗಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರು. ದೇಣಿಗೆ ನೀಡಿದ್ದಾರೆ.

ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಚೆಕ್‌ ನೀಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪುನೀತ್‌, ರಾಜ್ಯದ ಹಲವು ಜಿಲ್ಲೆಗಳಲ್ಲಿ ನೆರೆ ಉಂಟಾಗಿದ್ದು, ಅಲ್ಲಿನ ಜನತೆಗೆ ಕೈಲಾದಷ್ಟುನೆರವು ನೀಡಬೇಕು.

ಹೀಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೆರವು ಕೊಡುವ ಸಲುವಾಗಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೆ. ಇನ್ನಷ್ಟುಆರ್ಥಿಕ ನೆರವು ಕೊಡುವ ಯೋಜನೆ ಇದೆ. ಇದಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಹಾಕಿಕೊಂಡಿರುವುದಾಗಿ ಪುನೀತ್‌ ತಿಳಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.