ಪ್ರವಾಹದಲ್ಲಿ ಮೃತಪಟ್ಟ ಕುಟುಂಬಕ್ಕೆ ಮತ್ತು ಮನೆ ಕಳೆದುಕೊಂಡವರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ – ಸಿಎಂ

73 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಪ್ರವಾಹದಲ್ಲಿ ಮೃತಪಟ್ಟ ಕುಟುಂಬಕ್ಕೆ ಮತ್ತು ಮನೆ ಕಳೆದುಕೊಂಡವರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಈ ವೇಳೆ ಮಾತನಾಡಿದ ಬಿಎಸ್‍ವೈ ನಾಡ ಬಾಂಧವರೇ ನಿಮ್ಮಗೆಲ್ಲರಿಗೂ 73 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಮಹಾತ್ಮ ಗಾಂಧಿ ಹೇಳಿದಂತೆ ಸ್ವಾತಂತ್ರ್ಯ ಉಸಿರಾಟದಷ್ಟೇ ಅಮೂಲ್ಯವಾದದ್ದು, ಗಾಂಧಿ 150 ನೇ ಜನ್ಮ ವರ್ಷಾಚರಣೆಯ ಸಂದರ್ಭದಲ್ಲಿ ಸಂದೇಶ ನೀಡುವ ಅವಕಾಶ ಸಿಕ್ಕಿದು ಸಂತೋಷ ತಂದಿದೆ. ನಮಗೆ ಅಭಿವೃದ್ಧಿ ಆಡಳಿತದ ಮಂತ್ರ ಎಂದು ಹೇಳಿದರು.

ಕನ್ನಡಿಗರಿಗೆ ಉದ್ಯೋಗಕ್ಕೆ ಪ್ರಾತಿನಿಧ್ಯ ನೀಡುವುದು ಈ ಸರ್ಕಾರದ ಮೊದಲ ಆದ್ಯತೆ ಮತ್ತು ನಿಲುವು ಆಗಿದೆ. ಕನ್ನಡಿಗರ ಉದ್ಯೋಗ ಅವಕಾಶದಲ್ಲಿ ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ಎಚ್ಚರ ವಹಿಸುತ್ತೇವೆ. ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಹೆಚ್ಚುವರಿ 4 ಸಾವಿರ ನೆರವು ಕೊಡುತ್ತಿದ್ದೇವೆ. ಜನರ ಹಿತಕ್ಕಾಗಿ ಸರ್ಕಾರದಿಂದ ಬೆಂಬಲ ಬೆಲೆ ಘೋಷಣೆ ಮಾಡುತ್ತೇವೆ. ಸಕಾಲದಲ್ಲಿ ಖರೀದಿ ಕೇಂದ್ರ ತೆರೆಯಲು ಸರ್ಕಾರ ಬದ್ಧ ಎಂದು ತಿಳಿಸಿದರು.

 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.