ಮತ್ತೆ 17ಮಂದಿ ಅನರ್ಹ ಶಾಸಕರಿಗೆ ನಿರಾಸೆ : ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ

ನಾಳೆ ತಮ್ಮ ಪರ ತೀರ್ಪು ಬರಲಿದೆ ಎಂದು ಕಾದು ಕುಳಿತಿರುವ 17ಮಂದಿ ಅನರ್ಹ ಶಾಸಕರಿಗೆ ನಿರಾಸೆಯಾಗಿದೆ. ಹೌದು ನಾಳೆ ನಡೆಯಬೇಕಿದ್ದ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನ ಬುಧವಾರಕ್ಕೆ ಸುಪ್ರೀಂಕೋರ್ಟ್ ಮುಂದೂಡಿದೆ.

ತಮ್ಮನ್ನ ಅನರ್ಹಗೊಳಿಸಿ ಹಿಂದಿನ ಸ್ಪೀಕರ್ ಹೊರಡಿಸಿದ್ದ ಆದೇಶ ಪ್ರಶ್ನಿಸಿ 17 ಮಂದಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ನಾಳೆ ಅನರ್ಹ ಶಾಸಕರ ಅರ್ಜಿ ವಿಚಾರಣೆಗೆ ಸಮಯ ನಿಗದಿ ಮಾಡಲಾಗಿತ್ತು. ವಾದ ಮಂಡಿಸಲು ಸಿದ್ಧತೆ ಮಾಡಿಕೊಳ್ಳಲು ಒಂದು ವಾರ ಕಾಲಾವಕಾಶ ನೀಡುವಂತೆಮನವಿ ಮಾಡಿ ವಿಚಾರಣೆಯನ್ನ ಒಂದು ವಾರ ಮುಂದೂಡುವಂತೆ   ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಅವರು  ಸುಪ್ರೀಂಕೋರ್ಟ್ ಗೆ ಮನವಿ ಮಾಡಿದ್ದರು.

ಆದರೆ ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಮನವಿ ಪುರಸ್ಕರಿಸಿದ ಸುಪ್ರೀಂಕೋರ್ಟ್ ಕೇವಲ ಒಂದು ದಿನ ಸಮಯ ನೀಡಿ ವಿಚಾರಣೆಯನ್ನ ಅಕ್ಟೋಬರ್ 23ಕ್ಕೆ ಮುಂದೂಡಿದೆ. ಹೀಗಾಗಿ ವಿಚಾರಣೆ ಬುಧವಾರ ನಡೆಯಲಿದೆ. ಕಳೆದ ಬಾರಿಯ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್ ಇಂದು ನಡೆಯಬೇಕಿದ್ದ ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಗೆ ತಡೆ ನೀಡಿತ್ತು. ಬಳಿಕ ಡಿಸೆಂಬರ್ ನಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ನಿಗದಿಯಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.