ಮಲೆನಾಡು ಭಾಗದಲ್ಲಿ ಮುಂದುವರೆದ ಕಾಡಾನೆಗಳ ಹಾವಳಿ : ಆತಂಕದಲ್ಲಿರುವ ಕಾರ್ಮಿಕರು

ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಕಾರ್ಮಿಕರಲ್ಲಿ ಆತಂಕ ಮೂಡಿಸಿದೆ.

20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಲೇಶಪುರ ತಾಲ್ಲೂಕಿನ ವಡೂರು ಗ್ರಾಮದ ಸಮೀಪ ಬೀಡುಬಿಟ್ಟಿವೆ. ಕಾಡಾನೆಗಳ ದಾಳಿಯಿಂದ ಭತ್ತ, ಕಾಫಿ, ಮೆಣಸು ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಗಜಪಡೆ ಗಲಾಟೆಯಿಂದಮಲೆನಾಡು ಭಾಗದ ಜನತೆ ಸಂಕಷ್ಟಕ್ಕೆ ಸಿಲುಕಿದೆ. ಕಾಡಾನೆಗಳ ಹಾವಾಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸುತ್ತಿದ್ದಾರೆ.

ಆದರೆ ಸರ್ಕಾರಗಳ ದಿವ್ಯ ನಿರ್ಲಕ್ಷ್ಯದಿಂದ ಅನ್ನದಾತನ ಗೋಳು ತಪ್ಪುತ್ತಿಲ್ಲ. ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಲು‌ ಅರಣ್ಯ ಇಲಾಖೆ ಸಿಬ್ಬಂದಿಗಳ ಹರಸಾಹಸ ಪಡುತ್ತಿದ್ದಾರೆ. ಜೊತೆಗೆ ಹಗಲು ವೇಳೆಯೇ ಗ್ರಾಮಗಳ ಸಮೀಪ ಸಂಚರಿಸುತ್ತಿರುವ ಗಜಪಡೆ ಕಾಟದಿಂದ ಶಾಲಾ-ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ.

ಭಯದಲ್ಲೆ ಕಾಫಿ ತೋಟಗಳಿಗೆ ಕಾರ್ಮಿಕರು ಕೆಲಸಕ್ಕೆ ತೆರಳುತ್ತಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.