ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ…!

ತೆರಿಗೆ ವಂಚನೆ ಆಧಾರದ ಮೇಲೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಒಡೆತನದ ಕಾಲೇಜುಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ತುಮಕೂರಿನ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ. ಜಿ. ಪರಮೇಶ್ವರ ಒಡೆತನದ ಇಂಜಿನಿಯರಿಂಗ್, ಪದವಿ ಕಾಲೇಜುಗಳ ಮೇಲೆ ದಾಳಿ ನಡೆಸಲಾಗಿದೆ. ನೆಲಮಂಗಲದ ಸಿದ್ಧಾರ್ಥ ಮೆಡಿಕಲ್ ಕಾಲೇಜು ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಬಗ್ಗೆ ಕೊರಟಗೆರೆಯಲ್ಲಿ ಮಾತನಾಡಿದ ಮಾಜಿ ಡಿಸಿಎಂ, ಐಟಿ ದಾಳಿ ಮಾಡಲಿ ನಾನು ಬೇಡ ಎನ್ನಲ್ಲ, ನಮ್ಮಲ್ಲಿ ತಪ್ಪಿದ್ದರೆ ಅದಕ್ಕೆ ಕ್ರಮ ತೆಗೆದುಕೊಳ್ಳಲಿ ಎಂದು ಹೇಳಿದ್ದಾರೆ. ಆದರೆ ಈ ದಾಳಿ ರಾಜಕೀಯ ಒಳ ಸಂಚು ಅನ್ನೋದು ಚರ್ಚೆಯಾಗುತ್ತಿದೆ. ಮಾಜಿ ಸಿಎಂ ಶಿವಕುಮಾರ್ ನಂತರ ಡಾ.ಜಿ. ಪರಮೇಶ್ವರ್ ಟಾರ್ಗೇಟ್ ಮಾಡಿರುವುದು ಬಿಜೆಪಿಯ ಕುಮ್ಮಕ್ಕು ಇರಬಹುದು ಎನ್ನಲಾಗುತ್ತಿದೆ.

 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.