ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ : ಮೋದಿ, ಅಮಿತ್ ಶಾ ಆಸ್ಪತ್ರೆಗೆ ಭೇಟಿ

ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ರಾತ್ರಿ 11 ಗಂಟೆ ವೇಳೆಗೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ದೆಹಲಿಯ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಸುಮಾರು 1 ಗಂಟೆಗಳ ಕಾಲ ಆಸ್ಪತ್ರೆಯಲ್ಲೇ ಇದ್ದ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಬಳಿಕ 12 ಗಂಟೆಗೆ ಆಸ್ಪತ್ರೆಯಿಂದ ನಿರ್ಗಮಿಸಿದರು. ಮತ್ತೆ ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಆಸ್ಪತ್ರೆಗೆ ಮೋದಿ ಹಾಗೂ ಅಮಿತ್ ಶಾ ಭೇಟಿ ನೀಡಲಿದ್ದಾರೆ.

ಉಸಿರಾಟ ಹಾಗೂ ಹೃದಯ ಸಂಬಂಧಿ ಸಮಸ್ಯೆಯಿಂದ ಅರುಣ್ ಜೇಟ್ಲಿ ಅವರನ್ನು ಆಗಸ್ಟ್ 9 ಬೆಳಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. 66 ವರ್ಷದ ಅರುಣ್ ಜೇಟ್ಲಿ ಅವರನ್ನು ನೆಫ್ರಾಲಜಿಸ್ಟ್, ಹೃದ್ರೋಗ ತಜ್ಞರು ತಪಾಸಣೆ ಮಾಡಿದ್ದರು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವ ಹರ್ಷವಧನ್, ಗೃಹ ಸಚಿವ ಅಮಿತ್ ಶಾ ಅವರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.