ಮಿಂಟೋ ಆಸ್ಪತ್ರೆಯಲ್ಲಿ ವೈದ್ಯರ ಮೇಲಿನ ಹಲ್ಲೆ ಪ್ರಕರಣ : 12 ಮಂದಿ ಕರವೇ ಕಾರ್ಯಕರ್ತರ ಬಂಧನ

ಮಿಂಟೋ ಆಸ್ಪತ್ರೆಯಲ್ಲಿ ವೈದ್ಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಗೌಡ ಸೇರಿದಂತೆ 12 ಮಂದಿ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಚಿಕಿತ್ಸೆಗೆ ಒಳಗಾಗಿ ಕೆಲವರು ದೃಷ್ಟಿ ಕಳೆದುಕೊಂಡಿದ್ದರು. ಇದನ್ನು ಪ್ರಶ್ನಿಸಲು ಅಶ್ವಿನಿ ಗೌಡ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಆಸ್ಪತ್ರೆಗೆ ತೆರಳಿದ್ದರು. ಆಗ ಕರವೇ ಕಾರ್ಯಕರ್ತರು ವೈದ್ಯರ ವಾಗ್ವಾದ ಇಂಗ್ಲಿಷ್, ಕನ್ನಡ ಹೋರಾಟದ ರೂಪ ಪಡೆದಿತ್ತು. ಅಲ್ಲದೆ ಕರವೇ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಮಿಂಟೋ ಆಸ್ಪತ್ರೆ ಸಿಬ್ಬಂದಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು.

ಇಂದು ಕರವೇ ಕಾರ್ಯಕರ್ತರು ಶರಣಾಗಿದ್ದು ವಿವಿ ಪುರಂ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಈ ವಿಚಾರವಾಗಿ ಇಂದು ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಯ ಒಪಿಡಿಗಳನ್ನು ಬಂದ್ ಮಾಡಿ ವೈದ್ಯರು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ತಡರಾತ್ರಿ ಸಭೆ ನಡೆಸಿ ಅಶ್ವಿನಿ ಗೌಡ ಸೇರಿದಂತೆ 15 ಜನ ಕಾರ್ಯಕರ್ತರು ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ದಕ್ಷಿಣ ಡಿಸಿಪಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗುವ ಬಗ್ಗೆ ತೀರ್ಮಾನ ಮಾಡಿದ್ದರು.

ಅದರಂತೆ ಇಂದು ಬೆಳಗ್ಗೆ ವಿವಿಪುರಂ ಪೊಲೀಸ್ ಠಾಣೆಗೆ ಬಂದ ಅಶ್ವಿನಿ ಗೌಡ ಮಧುಸೂದನ್ ಯಾದವ್, ಮನು, ಗಾಯಿತ್ರಿ, ಸಂಗೀತಾ ಶೆಟ್ಟಿ ಸೇರಿದಂತೆ 12 ಕಾರ್ಯಕರ್ತರು ಶರಣಾಗಿದ್ದಾರೆ. ಈ 12 ಜನರನ್ನು ಬಂಧಿಸಿರುವ ಪೊಲೀಸರು ಮೊದಲಿಗೆ ವೈದ್ಯಕೀಯ ಪರಿಕ್ಷೇ ಮಾಡಿಸಿ ನಂತರ ಅವರನ್ನು ಕೋರ್ಟಿಗೆ ಹಾಜರುಪಡಿಸಲಿದ್ದಾರೆ. ಈ ಬಗ್ಗೆ ಬೆಳಗ್ಗೆ ಮಾತನಾಡಿದ್ದ ನಾರಾಯಣಗೌಡ ಹಾಗೂ ಹಲ್ಲೆ ಆರೋಪಿ ಅಶ್ವಿನಿಗೌಡ, ವೈದ್ಯರಿಗೆ ಹೆದರಿ ಈ ತೀರ್ಮಾನ ತೆಗೆದುಕೊಂಡಿಲ್ಲ. ಜನರಿಗೆ ತೊಂದರೆಯಾಗಬಾರದೆಂದು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights