ರಾಕಿಂಗ್ ಸ್ಟಾರ್ ಯಶ್ ಗೆ ಬಿಗ್ ಶಾಕ್ : ಕೆಜಿಎಫ್ 2 ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೆಜಿಎಫ್ 2 ಸಿನಿಮಾ. ಇದಕ್ಕೆ ಈಗಾಗಲೇ ಚಿತ್ರೀಕರಣ ಶುರುವಾಗಿದೆ.. ಕೋಲಾರದ ಕೆಜಿಎಫ್ ನ ಕೆನಡೀಸ್ ಸೈನೈಡ್ ಗುಡ್ಡದ ಮೇಲೆ ಚಿತ್ರೀಕರಣ ನಡೆಯುತ್ತಿದೆ.

ಸೈನೈಡ್ ಗುಡ್ಡದ ಮೇಲೆ ಬೃಹತ್,ದುಬಾರಿ ಸೆಟ್ ನಲ್ಲಿ ಚಿತ್ರೀಕರಿಸಲಾಗುತ್ತಿದೆ. ಆದರೀಗ ಜಿಎಫ್ 2 ತಂಡಕ್ಕೆ ಬಿಗ್ ಶಾಕ್ ಉಂಟಾಗಿದೆ.

ಹೌದು.. ಕೆಜಿಎಫ್ 2 ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿದೆ.  ನಿರ್ಮಾಪಕರಿಗೆ ನೋಟಿಸ್ ನೀಡಿ ಚಿತ್ರೀಕರಣಕ್ಕೆ ತಡೆಯಾಜ್ಞೆ ಹೊರಡಿಸಲಾಗಿದೆ. ಯಶ್ ಅಭಿನಯದ ಚಿತ್ರಕ್ಕೆ ಕೆಜಿಎಫ್ ನ JMFC ಕೋರ್ಟ್ ತಡೆಯಾಜ್ಞೆ ನೀಡಿದೆ.

ಕೆಜಿಎಫ್ ನಲ್ಲಿ ಪರಿಸರ ಹಾನಿ ಹಾಗೂ ಚಿತ್ರೀಕರಣದಿಂದ ಸಾರ್ವಜನಿಕರಿಗೆ ತೊಂದರೆ ಎಂದು ದೂರು ದಾಖಲಾಗಿದ್ದು,  ಕೆಜಿಎಫ್ ನ ರಾಷ್ಟ್ರೀಯ ಪ್ರಜಾ ಚಕ್ರವ್ಯೂಹ ಪಕ್ಷದ ಅಧ್ಯಕ್ಷ ಶ್ರೀನಿವಾಸ್ ಎಂಬುವವರಿಂದ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.