ರಾಜ್ಯದ 22 ಜಿಲ್ಲೆಗಳಲ್ಲಿ ಭೀಕರ ಮಳೆ : ಬಿಡಿಗಾಸು ಬಿಡುಗಡೆ ಮಾಡದ ಕೇಂದ್ರ ಸರ್ಕಾರ

ರಾಜ್ಯದ 22 ಜಿಲ್ಲೆಗಳಲ್ಲಿ ಭೀಕರ ಮಳೆಯಾಗುತ್ತಿದೆ. ಪ್ರವಾಹದಿಂದ ಸಾವಿರಾರು ಕೋಟಿ ಆಸ್ತಿ ಪಾಸ್ತಿ ನಷ್ಟವಾಗಿ ಜನ ಜಾನುವಾರು ಸಾವಿಗೀಡಾಗಿವೆ. ಿಷ್ಟೆಲ್ಲಾ ಹಾನಿಯಾಗಿ ಜನ ಜೀವನ ಬೀದಿಪಾಲಾದರೂ ಕೇಂದ್ರ ಸರ್ಕಾರ ಮಾತ್ರ ಇತ್ತ ಕಣ್ಣಾಯಿಸಿಲ್ಲ. ಇದುವರೆಗೂ ಬಿಜೆಪಿಯ ಕೇಂದ್ರ ಸರ್ಕಾರದಿಂದ ಒಂದು ರೂಪಾಯಿ ಬಿಡಿಗಾಸು ಬಿಡುಗಡೆಯಾಗಿಲ್ಲ.

ರಾಜ್ಯದ ಬಿಜೆಪಿಯ 3 ಜನ ಕೇಂದ್ರ ಸಚಿವರು ಹಾಗೂ 25 ಜನ ಸಂಸದರಿದ್ದರೂ ಕೂಡ ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಒತ್ತಡ ಹೇರುತ್ತಿಲ್ವಾ ಅನ್ನೋ ಪ್ರಶ್ನೆ ಎದುರಾಗಿದೆ. ಇವರೆಗೂ ಪ್ರವಾಹ ಸಂತ್ರಸ್ತರ ಕಣ್ಣೀರು ಒರೆಸುವ ಕೆಲಸವಾಗಿಲ್ಲ.

ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯ ವಿರುದ್ಧ ಕೊರಟಗೆರೆ ಪಟ್ಟಣದಲ್ಲಿ ಕಾಂಗ್ರೆಸ್ ಸಮಿತಿವತಿಯಿಂದ ಎಲ್ಲಾ ಜನಪ್ರತಿನಿಧಿಗಳು ˌ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಮುಖಂಡರು ಮತ್ತು ಕಾರ್ಯಕರ್ತರು ನೇತೃತ್ವದಲ್ಲಿ ಧರಣೆ ಸತ್ಯಾಗ್ರಹ ನಡೆಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.