ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಅಧಿಕಾರಿ….!

ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ಎಸಿಬಿ ಅಧಿಕಾರಿಗಳ ತಂಡ ಹಾವೇರಿ ಜಿಲ್ಲಾಡಳಿತ ಭವನದಲ್ಲಿ ದಾಳಿ ನಡೆಸಿದ ವೇಳೆ ಸಿಕ್ಕಿಬಿದ್ದಿದ್ದಾರೆ.

20 ಸಾವಿರ ಬೇಡಿಕೆ ಇಟ್ಟಿದ್ದ ಸಿದ್ದಬಸವ, 10 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕುರಿ ಸಾಕಾಣಿಕೆ ಸಹಾಯದನ 3.50 ಲಕ್ಷ ಚೆಕ್ ವಿತರಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಿದ್ದಬಸವನ ವಿರುದ್ಧ ಜಿಲ್ಲೆಯ ಶಿಶುನಾಳ‌ ಗ್ರಾಮದ ಮಂಜಪ್ಪ ಮಾದರ ಎಂಬುವವರು ಎಸಿಬಿಗೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡ ಎಸಿಬಿ ಡಿವೈಎಸ್ಪಿ ಪ್ರಹ್ಲಾದ ನೇತೃತ್ವದಲ್ಲಿ ದಾಳಿ ನಡೆಸಿದೆ. ಸದ್ಯ ಆರೋಪಿ ಸಿದ್ದಬಸವನ ವಶಕ್ಕೆ ಪಡೆಯಲಾಗಿದ್ದು, ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.