ಲಕ್ಷಾಂತರ ಮೌಲ್ಯದ ಶ್ರೀಗಂಧದ ಮರ ಹೊತ್ತೊಯ್ದ ಕಳ್ಳರು : ಕಂಗಾಲಾದ ರೈತ

ಲಕ್ಷಾಂತರ ಮೌಲ್ಯದ ಶ್ರೀಗಂಧದ ಮರವನ್ನು ಕಳ್ಳರು ಹೊತ್ತೊಯ್ದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಜಗದೀಶಗೌಡ ಪಾಟೀಲ್ ಎಂಬುವರ ಜಮೀನಿನಲ್ಲಿಯ ಶ್ರೀಗಂಧದ ಮರಗಳು ಕಳ್ಳತನವಾಗಿದೆ. ಒಂಬತ್ತು ವರ್ಷದಿಂದ ಕಣ್ಣಲ್ಲಿ ಕಣ್ಣಿಟ್ಟು ಕಾಯ್ದಿದ್ದ ಮರಗಳನ್ನು ಕೊರೆದು, ಹೊತ್ತೊಯ್ದಿದ್ದಾರೆ ಖದೀಮರು. ಒಂಬತ್ತು ಮರಗಳನ್ನು ಕೊಯ್ದು, ಎರಡು ಮರಗಳ ಕಳ್ಳತನ ಮಾಡಿದ ಖದೀಮರು ಇನ್ನೂ ಏಳು ಮರಗಳನ್ನು ಜಮೀನಿನಲ್ಲಿಯೆ ಬಿಟ್ಟು ಕಾಲ್ಕಿತ್ತಿದ್ದಾರೆ.

ಹತ್ತು ಲಕ್ಷಕ್ಕೂ ಅಧಿಕ ಮೌಲ್ಯದ ಶ್ರೀಗಂಧದ ಮರಗಳನ್ನು ಕಳೆದುಕೊಂಡ ರೈತ ಜಗದೀಶಗೌಡ ಕಂಗಾಲಾಗಿದ್ದಾರೆ. ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.