ಶಾಲೆ ಗೋಡೆ ಕುಸಿತ : ತಪ್ಪಿದ ಭಾರೀ ಅನಾಹುತ – ಇಂದು ಶಾಲೆ ಕಾಲೇಜುಗಳಿಗೆ ರಜೆ

ನಿರಂತರ ಮಳೆಯಿಂದಾಗಿ ಶಾಲೆಯ ಗೋಡೆ ಕುಸಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರ ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆ ಕುಸಿದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಕಳೆದ ವಾರದಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಾವೇರಿ ಜಿಲ್ಲೆಯಲ್ಲಿ ಶಾಲೆಯೊಂದು ಕುಸಿದು ಬಿದ್ದಿದೆ.  ಭಾರೀ ಮಳೆಯಿಂದಾಗಿ ಇಂದೂ ಕೂಡ ಶಾಲಾ-ಕಾಲೇಜುಗಳಿಗೆ ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ರಜೆ ಘೋಷಣೆ ಮಾಡಿದ್ದಾರೆ.

ಬಹಳ ಹಳೆಯದಾದ ಗೋಡೆಗಳು, ನಿರಂತರ ಮಳೆಯಿಂದಾಗಿ ಇಂದು ಕುಸಿದಿದೆ. ಪ್ರತಿದಿನ ಪಾಠ ಕೇಳುತ್ತಿದ್ದ, ಆಟ ಆಡುತ್ತಿದ್ದ  ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.