ಸಂಪ್ರದಾಯ ಮತ್ತು ದೇವರ ನಂಬಿಕೆಗೆ ದಕ್ಕೆ : ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ವಿರುದ್ಧ ದೂರು

ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ವಿರುದ್ಧ ಪ್ರಶಾಂತ್ ಸಂಬರಗಿ ಎಂಬುವವರಿಂದ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.

ಮೈಸೂರು ಯುವ ದಸರಾದಲ್ಲಿ ಚೆಂದನ್ ಶೆಟ್ಟಿ ನಿವೇದಿತಾ ಗೌಡ ಅವರಿಗೆ ರಿಂಗ್ ತೊಡಿಸಿ ಸಂಪ್ರದಾಯ ಮತ್ತು ದೇವರ ನಂಬಿಕೆಗೆ ದಕ್ಕೆಯುಂಟು ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಸಾರ್ವಜನಿಕ ಕಾರ್ಯಕ್ರಮ ಎಂದು ತಿಳಿದಿದ್ದರು ರಿಂಗ್ ತೊಡಿಸಿ ದಕ್ಕೆ ತಂದಿದ್ದಾರೆ.

ಈ ಬಗ್ಗೆ ಸಚಿವ ವಿ ಸೋಮಣ್ಣ ಕೂಡ ಚಂದನ್ ಶೆಟ್ಟಿ ಮಾಡಿದ್ದು ತಪ್ಪು ಎಂದು ಹೇಳಿಕೆ ನೀಡಿದ್ದರು. ಜೊತೆಗೆ ಸಾಮಾಜಿಕ ಜಾಲ ತಾಣಗಳಲ್ಲಿ ಸಾಕಷ್ಟು ಕಮೆಂಟ್ ಗಳನ್ನು ನೆಟ್ಟಿಗರು ಮಾಡಿದ್ದಾರೆ.

ಸರ್ಕಾರಿ ಕಾರ್ಯಕ್ರಮದಲ್ಲಿ ವೈಯಕ್ತಿಕ ಕಾರ್ಯಕ್ರಮ ಮಾಡಿ ದುರುಪಯೋಗ ಮಾಡಿದ್ದಾರೆ ಎಂದು ದೂರು ನೀಡಿಲಾಗಿದೆ. ಚಂದನ್ ಶೆಟ್ಟಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಎನ್ ಸಿಆರ್ ದಾಖಲು ಮಾಡಲಾಗಿದೆ. ಪ್ರಶಾಂತ್ ಸಂಬರಗಿ ದೂರು ಆಧರಿಸಿ ಎನ್ ಸಿಆರ್ ದಾಖಲಿಸಿದ ಪೊಲೀಸರು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.