ಅಧಿಕಾರ ರಚನೆಗೆ ಹಾವು ಏಣಿ ಆಟ : ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು?

ಅಧಿಕಾರ ರಚನೆಗೆ ಹಾವು ಏಣಿ ಆಟ ನಡೆಯುತ್ತಿರುವಂತೆಯೇ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಸೋಮವಾರ ರಾತ್ರಿ ಎನ್‍ಸಿಪಿಗೆ ಸರ್ಕಾರ ರಚಿಸುವಂತೆ ಆಹ್ವಾನ ನೀಡಿ ರಾತ್ರಿ 8:30ರ ವರೆಗೆ ಗಡುವು ನೀಡಿದ್ದರು. ಈ ಗಡುವು ಮುಗಿಯುವದರ ಒಳಗೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ್ದಾರೆ. ರಾಜ್ಯಪಾಲರ ಶಿಫಾರಸು ಬರುತ್ತಿದ್ದಂತೆ ಮೋದಿ ನೇತೃತ್ವದ ನಡೆದ ಕ್ಯಾಬಿನೆಟ್ ಸಭೆ ತುರ್ತು ಒಪ್ಪಿಗೆ ನೀಡಿದ್ದು ರಾಷ್ಟ್ರಪತಿ ಆಡಳಿತ ಜಾರಿಗೆ ಬಂದಿದೆ.

ಯಾವುದೇ ಪಕ್ಷದಿಂದಲೂ ಸರ್ಕಾರ ರಚಿಸುವ ಪ್ರಯತ್ನ ಕಂಡುಬರದ ಹಿನ್ನೆಲೆಯಲ್ಲಿ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದ್ದಾರೆನ್ನಲಾಗಿದೆ. ರಾಜ್ಯಪಾಲರ ಶಿಫಾರಸು ಪತ್ರ ಕೇಂದ್ರ ಸರ್ಕಾರವನ್ನು ತಲುಪಿದ್ದು, ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಸಿಕ್ಕಿದೆ. ಈ ಮೂಲಕ ಬಿಜೆಪಿ, ಶಿವಸೇನೆ, ಕಾಂಗ್ರೆಸ್​ ಮತ್ತು ಎನ್​ಸಿಪಿ ನಡುವಿನ ಹಗ್ಗಜಗ್ಗಾಟಕ್ಕೆ ರಾಷ್ಟ್ರಪತಿ ಅಂಕುಶದ ಅಂತ್ಯ ಸಿಕ್ಕಿದ್ದು, ಮುಂದಿನ ಬೆಳವಣಿಗೆಯ ಬಗ್ಗೆ ಇನ್ನೂ ಹೆಚ್ಚು ಕುತೂಹಲ ಮನೆ ಮಾಡುವಂತಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights