ಕೆ.ಆರ್.ಪೇಟೆ ಉಪ ಚುನಾವಣೆ ಹಿನ್ನೆಲೆ ಪೊಲೀಸ್ ಬಿಗಿ ಭದ್ರತೆ : ಇಂದು 3 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಕೆ.ಆರ್.ಪೇಟೆ ಉಪ ಚುನಾವಣೆ ಹಿನ್ನೆಲೆ ಇಂದು ಪ್ರಮುಖ ಮೂರು ಪಕ್ಷದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಗೆ ಭರದ ಸಿದ್ಧತೆ ನಡೆದಿದೆ.

ಕಾಂಗ್ರೆಸ್ ನಿಂದ ಕೆ‌.ಬಿ. ಚಂದ್ರಶೇಖರ್ ,ಬಿಜೆಪಿ ಯಿಂದ ಕೆ.ಸಿ.ನಾರಾಯಣಗೌಡ, ಜೆಡಿಎಸ್ ನಿಂದ ಬಿ.ಎಲ್.ದೇವರಾಜು ನಾಮಪತ್ರ ಸಲ್ಲಿಸಲಿದ್ದಾರೆ. ಮೂರು ಪಕ್ಷದ ಅಭ್ಯರ್ಥಿಗಳು ಪಕ್ಷದ ನಾಯಕರುಗಳು ಮತ್ತು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲ್ಲಿದ್ದು, ನಾಮಪತ್ರ ಸಲ್ಲಿಕೆಗೆ ಮೂರು ಪಕ್ಷಗಳಿಂದ ಭಾರಿ ಜನಸ್ತೋಮ ಆಗಮನದ ನಿರೀಕ್ಷೆ ಇದೆ. ಇಂದು ಬೆಳೆಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೩ ಗಂಟೆಯ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ.

ಮೂರು ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿರುವುದರಿಂದ ಮಂಡ್ಯದ ಕೆ.ಆರ್. ಪೇಟೆಯಲ್ಲಿ ಬಿಗಿ ಪೊಲೀಸ್ ಭದ್ರತೆ‌ ಒದಗಿಸಲಾಗಿದೆ. ಜೊತೆಗೆ ಜಿಲ್ಲಾಡಳಿತದಿಂದ ಕೆ.ಆರ್‌.ಪೇಟೆಯಲ್ಲಿಂದು ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಡಣದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ. ಪಕ್ಷದ ಅಭ್ಯರ್ಥಿಗಳ ಮೆರವಣಿಗೆಗೆ ಭದ್ರತೆಗೆ ೩ ಡಿವೈಎಸ್ಪಿ, ೨ ಸಿಪಿಐ,೪ ಎಸ್ಐ,೧ ಕೆಸ್ಸಾರ್ಪಿ, ೧ ಡಿಆರ್,೬೦ ಪೊಲೀಸರು ನಿಯೋಜನೆ ಮಾಡಲಾಗಿದೆ.

ಚುನಾವಣಾಧಿಕಾರಿ ಕಚೇರಿ ಬಳಿ ಭದ್ರತೆಗೆ ೪ ಡಿವೈಎಸ್ಪಿ ನೇತೃತ್ವದಲ್ಲಿ ಭದ್ರತೆ, ಸ್ಥಳದಲ್ಲಿನ ಭದ್ರತೆಗೆ ೪ ಸಿಪಿಐ, ೧೨. ಎಸ್ಪೈ, ೫ ಡಿಆರ್,೫ ಕೆಎಸ್ಸಾರ್ಪಿ,೨೫೦ ಪೊಲೀಸರ ನಿಯೋಜನೆ ಮಾಡಲಾಗಿದೆ. ಯಾವುದೇ ಗಲಾಟೆಗೆ ಆಸ್ಪದ ಕೊಡದೆ ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ‌ ಮಾಡಲಾಗಿದ್ದು ಶಾಂತಿ ಸುವ್ಯವಸ್ಥೆಗೆ ಭಂಗ ತಂದರೆ ಅಗತ್ಯ ಕಾನೂನು ಕ್ರಮದ ಎಚ್ಚರಿಕೆ ಕೂಡ ಕೊಡಲಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights