ಕೇಂದ್ರ ಸರಕಾರದ ಮಲತಾಯಿ ಧೋರಣೆ ಖಂಡಿಸಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳಿಂದ ಬೃಹತ್‌ ಪ್ರತಿಭಟನೆ

ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪ್ರವಾಹದಿಂದ ಜನ ತತ್ತರಿಸಿದ್ದಾರೆ. ಮನೆ – ಮಠ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಬದುಕು ಬರ್ಬರವಾಗಿದೆ. ಆದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡಿಗಾಸೂ ನೀಡಿಲ್ಲ. ನೆರೆ ಪೀಡಿತರ ಕಣ್ಣೀರು ಒರೆಸುವ ಪ್ರಯತ್ನ ಮಾಡಿಲ್ಲ.

ಆದರೆ ಉತ್ತರ ಭಾರತದ ಬಿಹಾರದಲ್ಲಿ ಉಂಟಾದ ಪ್ರವಾಹಕ್ಕೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಿದೆ. ನೆರವು ನೀಡುವ ಭರವಸೆಯನ್ನು ನೀಡಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ನೈತಿಕ ಬೆಂಬಲ ನೀಡಿದ್ದಾರೆ. ಆದರೆ ಕರ್ನಾಟಕವನ್ನು ಸಂಪೂರ್ಣವಾಗಿ ಮರೆತು ಹೋಗಿದ್ದಾರೆ.

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆಯನ್ನು ಖಂಡಿಸುತ್ತದೆ. ಈ ಧೋರಣೆ ವಿರೋಧಿಸಿ ಅಕ್ಟೋಬರ್ 3ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ. ಮುಂಜಾನೆ 9.30ಕ್ಕೆ ರಾಜಾಜಿನಗರದ ಬಾಷ್ಯಂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಅಲ್ಲಿಂದ ರಾಮಮಂದಿರ ಮಾರ್ಗವಾಗಿ ಫ್ರೀಡಂ ಪಾರ್ಕವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದಶಕ ಶ್ರೀ ಶಂಕರ್ ಬಿದರಿ ಅವರು ಪ್ರತಿಭಟನೆಗೆ ಚಾಲನೆ ನೀಡಲಿದ್ದಾರೆ ಎಂದು ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೆರೆ ಸಂತ್ರಸ್ತರಿಗಾಗಿ ಮಿಡಿಯುವ ಎಲ್ಲ ಹೃದಯಗಳಿಗೆ ಸ್ವಾಗತ. ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಹಲವಾರು ಸಂಘ ಸಂಸ್ಥೆಗಳ ಸಾವಿರಾರು ಜನ ಸದಸ್ಯರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಶಿವಕುಮಾರ್ ಮೇಟಿ ಹೇಳಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights