ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಇನ್ನಿಲ್ಲ…!

ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಸ್ಯಾಕ್ಸೋಫೋನ್ ಚಕ್ರವರ್ತಿ, ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದ ಅವರು ದಕ್ಷಿಣಕನ್ನಡಜಿಲ್ಲೆ ಸಜಿಪಮೂಡದಲ್ಲಿ ಜನಿಸಿದ್ದರು. ಪತ್ನಿ ಮತ್ತು ಪುತ್ರ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮಂಗಳೂರು ಪದವಿನಂಗಡಿ ಮನೆಯಲ್ಲಿ ಇಂದು ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

1948 ರ ಡಿಸೆಂಬರ್ 11 ರಂದು ಜನಿಸಿದ ಕದ್ರಿ ಗೋಪಾಲನಾಥ್, ವಿಧೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡಿದ್ದರು. ಅದಕ್ಕೆ ಭಾರತೀಯ ಸಂಗೀತವನ್ನು ಕರಗತ ಮಾಡಿಸಿದವರಲ್ಲಿ ಪ್ರಮುಖರಾಗಿದ್ದರು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

One thought on “ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಇನ್ನಿಲ್ಲ…!

  • January 8, 2021 at 8:28 pm
    Permalink

    For newest news you have to pay a visit world-wide-web and on the web I found
    this web site as a most excellent site for latest updates.

    Reply

Leave a Reply

Your email address will not be published.

Verified by MonsterInsights