ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಮತ್ತೆ ಬ್ರೇಕ್…

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಮತ್ತೆ ಬ್ರೇಕ್ ಹಾಕಲಾಗಿದೆ. ಅಧಿಕ ಮಳೆಯಿಂದಾಗಿ ಚಾರ್ಮಾಡಿ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. ರಸ್ತೆ ಸಂಚಾರಕ್ಕೆ ಸಾಕಷ್ಟು ತೊಂದರೆಯನ್ನುಂಟಾದ ಪರಿಣಾಮ ಸುಮಾರು ದಿನಗಳಿಂದ ರಸ್ತೆ ಸಂಚಾರ ಬಂದ್ ಮಾಡಲಾಗಿತ್ತು. ಆದರೆ ಬೆಳಿಗ್ಗೆಯಷ್ಟೇ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತಾದರೂ ಮತ್ತೆ ಸಂಚಾರಕ್ಕೆ ತೊಂದರೆಯುಂಟಾಗುವ ಸಾಧ್ಯತೆ ಇರುವುದರಿಂದ ಬಂದ್ ಮಾಡಲಾಗಿದೆ.

ಕೊಟ್ಟಿಗೆಹಾರದಿಂದ ದಕ್ಷಿಣ ಕನ್ನಡಕ್ಕೆ ಸಂಪರ್ಕ ಕಲ್ಪಿಸೋ ಮಾರ್ಗ ವಾಹನ ಸಂಚಾರ ನಿಷೇಧ ಮಾಡಿ ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ಜಿಲ್ಲಾಡಳಿತ ಇಂದಿನಿಂದ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿತ್ತು. ಆದರೆ ಗುಡ್ಡ ಕುಸಿಯುವ ಸಾಧ್ಯತೆ ಇರೋದ್ರಿಂದ ವಾಹನ ಸಂಚಾರಕ್ಕೆ ಮತ್ತೆ ಬ್ರೇಕ್ ಹಾಕಲಾಗಿದೆ.

ಎಲ್ಲಾ ರೀತಿಯ ವಾಹನ ಸಂಚಾರ ನಿಷೇಧಗೊಳಿಸಿ ಆದೇಶ ಹೊರಡಿಸಲಾಗಿದೆ. ಇನ್ನಷ್ಟು ದಿನ ಚಾರ್ಮಾಡಿ ಘಾಟ್ ಸಹಜ ಸ್ಥಿತಿಗೆ ಬರಲು ಬೇಕಾಗಿದೆ ಎನ್ನುವ  ಪೊಲೀಸರ ವರದಿ ಆಧರಿಸಿ ವಾಹನ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಹೀಗಾಗಿ  ಚಾರ್ಮಾಡಿ ಮಾರ್ಗವಾಗಿ ಸಂಚಾರ ಕೈಗೊಳ್ಳುವುದನ್ನ ಮುಂದುಊಡುವುದು ಒಳಿತು.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights