ಚಿಕ್ಕಮಗಳೂರಿನಲ್ಲಿ ಮುಂದುವರೆದ ಮಳೆ ಅಬ್ಬರ : ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಚಿಕ್ಕಮಗಳೂರಿನಲ್ಲಿ ಮುಂದುವರೆದ ಮಳೆ ಅಬ್ಬರದಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು, ಬಣಕಲ್, ದಾರದಹಳ್ಳಿ, ಗೋಣಿಬೀಡು ಭಾಗಗಳಲ್ಲಿ ಕಳೆದ ಒಂದು ವಾರದಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಕಳಸ ಕುದುರೆಮುಖ ಭಾಗದಲ್ಲೂ ಭಾರೀ ಮಳೆಯಾಗುತ್ತಿದೆ. ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನಲ್ಲೂ ಧಾರಾಕಾರ ಮಳೆಯಾಗುತ್ತಿದೆ.

ಮಳೆಯಿಂದ ಭದ್ರಾನದಿ ಹರಿವಿನ ಮಟ್ಟ ಹೆಚ್ಚಳವಾಗಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ವಿದ್ಯುತ್ ಸಂಪರ್ಕ ಇಲ್ಲದೆ ಕತ್ತಲಲ್ಲಿವೆ ಮಲೆನಾಡಿನ ಕೆಲ ಗ್ರಾಮದ ಜನರು ಕಾಲ ಕಳೆಯುವಂತಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights