ತಿಹಾರ್ ಜೈಲ್ ಭೇಟಿ ನೀಡಿದ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ 

ಅಕ್ರಮ ಆಸ್ತಿ ಗಳಿಕೆ ವಿಚಾರಕ್ಕೆ ಇಡಿ ವಿಚಾರಣೆಗೆ ಒಳಪಟ್ಟಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಕೈ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್  ತಿಹಾರ್ ಜೈಲಿಗೆ ಭೆಟಿ ನೀಡದ್ದಾರೆ.

ಕಾಂಗ್ರೆಸ್ಸಿನ ಇಬ್ಬರು ಪ್ರಭಾವಿ ನಾಯಕರಾದ ಪಿ. ಚಿದಂಬರಂ ಹಾಗೂ ಡಿಕೆ ಶಿವಕುಮಾರ್ ಅವರು ತಿಹಾರ್ ಜೈಲು ಸೇರಿದ್ದು ಇಂದು ಬೆಳಗ್ಗೆ ತಿಹಾರ್ ಜೈಲಿಗೆ ಭೇಟಿ ನೀಡಿರುವ ಸೋನಿಯಾ ಅವರು ಡಿಕೆಶಿ ಜೊತೆ ಮಾತುಕತೆ ನಡೆಸಿ ನೈತಿಕ ಸ್ಥೈರ್ಯ ತುಂಬಿದ್ದಾರೆ. ಅಲ್ಲದೆ ಪಕ್ಷ ನಿಮ್ಮ ಜೊತೆಗಿದೆ ಎಂಬ ಸಂದೇಶವನ್ನು ರವಾನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ತಿಹಾರ್ ಜೈಲಿನ ಜೈಲ್ ನಂ.7 ರಲ್ಲಿ ಚಿದಂಬರಂ ಹಾಗೂ ಡಿಕೆಶಿ ಇದ್ದಾರೆ. ಹೀಗಾಗಿ ಅಲ್ಲಿಯೇ ಇಬ್ಬರನ್ನೂ ಸೋನಿಯಾ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷ ಕೂಡ ಸಂಕಷ್ಟದಲ್ಲಿರುವ ನಾಯಕ ಬೆನ್ನಿಗೆ ನಿಲ್ಲುತ್ತದೆ. ಅವರಿಗೆ ಧೈರ್ಯವನ್ನು ಕೊಡುತ್ತದೆ. ಅಲ್ಲದೆ ಮುಂದಿನ ಹೋರಾಟಕ್ಕೆಲ್ಲ ಪಕ್ಷ ನಿಮ್ಮ ಜೊತೆಗಿರುತ್ತದೆ ಎಂಬ ಮೆಸೇಜ್ ಪಾಸ್ ಮಾಡುವ ಪ್ರಯತ್ನ ಮಾಡಿದ್ದಾರೆ.

ಡಿಕೆಶಿ ಅವರ ಆಸ್ಪತ್ರೆಯಲ್ಲಿರುವಾಗ ರಾಜ್ಯದ ಕೆಲ ನಾಯಕರು ಅವರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದ್ದರು. ಆದರೆ ಡಿಕೆಶಿ ಜೈಲು ಸೇರಿದ ಬಳಿಕ ಯಾವೊಬ್ಬ ನಾಯಕ ಕೂಡ ಇದೂವರೆಗಹೂ ಭೇಟಿ ಮಾಡಿಲ್ಲ. ಇನ್ನೊಂದು ವಿಚಾರವೆಂದರೆ, ತಿಹಾರ್ ಜೈಲಿಗೆ ಎಲ್ಲರಿಗೂ ಪ್ರವೇಶವಿಲ್ಲ. ಕೇವಲ ಪ್ರಮುಖ ಗಣ್ಯರು ಹಾಗೂ ಸಂಬಂಧಿಕರಿಗೆ ಮಾತ್ರ ಡಿಕೆಶಿ ಅಥವಾ ಚಿದಂಬರಂ ಭೇಟಿಗೆ ಅವಕಾಶವಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights