ಮಹಾರಾಷ್ಟ್ರ ರಾಜ್ಯ ರಾಜಕಾರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಶಿವಸೇನೆ, ಕಾಂಗ್ರೆಸ್, ಎನ್ ಸಿಪಿ ಸರ್ಕಾರ ಜಾರಿಯಾಗುತ್ತೆ ಎನ್ನಲಾಗಿತ್ತು. ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದು ಹೇಳಲಾಗಿತ್ತು. ಆದ್ರೀಗ ದಿಢೀರ್ ಬೆಳವಣಿಗೆ ನಡೆದು ಎನ್ ಸಿಪಿ ಮತ್ತು ಬಿಜೆಪಿ ಮೈತ್ರಿ ಸರ್ಕಾರ ರಚನೆಯಾಗಿದ್ದು, ಬಿಜೆಪಿಯ ದೇವೇಂದ್ರ ಫಡ್ನವೀಸ್ ಸಿಎಂ ಆಗಿ, ಡಿಸಿಎಂ ಆಗಿ ಎನ್ ಸಿಪಿಯ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇಂದು (ಶನಿವಾರ) ಬೆಳಗ್ಗೆ ರಾಜಭವನದಲ್ಲಿ ನಡೆದ ಸರಳ ಪ್ರಮಾಣ ವಚನ ಸಮಾರಂಭದಲ್ಲಿ ರಾಜ್ಯಪಾಲ ಭಗತ್​ ಸಿಂಗ್​​ ಕೋಶಿಯಾರ್, ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು

ಇನ್ನು ಇದಕ್ಕೂ ಮೊದಲು ಶಿವಸೇನೆ, ಬಿಜೆಪಿ ಮತ್ತು ಎನ್ ಸಿಪಿ ಪಕ್ಷಗಳು ಸರ್ಕಾರ ರಚನೆಯ ಸರ್ಕಸ್ ನಡೆಸಿದ್ದವು. ಚುನಾವಣಾ ಫಲಿತಾಂಶದ ನಂತರ ಬಿಜೆಪಿ ಮತ್ತು ಶಿವಸೇನೆ ನಡುವಿನ ಮೈತ್ರಿ ಮುರಿದು ಬಿತ್ತು. ನಂತರ ಎರಡೂ ಪಕ್ಷಗಳು ಅಧಿಕಾರ ರಚನೆಗೆ ಕಸರತ್ತು ನಡೆಸಿದ್ದವು. ಆದರೆ ಸದ್ದಿಲ್ಲದೇ ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ಬಂದಿದೆ.