ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟ

ಅಕ್ಟೋಬರ್ 21ರಂದು ನಡೆದ ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಎರಡು ರಾಜ್ಯಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಸಂಜೆ 5 ಗಂಟೆಯ ಸುಮಾರಿಗೆ ಅಂತಿಮ ಫಲಿತಾಂಶವನ್ನು ಚುನಾವಣಾ ಆಯೋಗ ಘೋಷಣೆ ಮಾಡಲಿದೆ. ಅ. 21ರಂದು ಚುನಾವಣೆಯಾದ 15 ರಾಜ್ಯಗಳ ಉಪಚುನಾವಣೆ ಫಲಿತಾಂಶವೂ ಇಂದೇ ಬರಲಿದೆ.

ಮಹರಾಷ್ಟ್ರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಗಳ ಮತ ಎಣಿಕೆ  ಆರಂಭವಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಮತ್ತು ಹರಿಯಾಣದಲ್ಲಿ ಬಿಜೆಪಿ ನಿಚ್ಚಳ ಬಹುಮತ ಸಾಧಿಸಲಿವೆ ಎಂದು ಮತಗಟ್ಟೆ ಸಮೀಕ್ಷೆಗಳು ಅಭಿಪ್ರಾಯಪಟ್ಟಿವೆ. ಆದರೆ ಒಟ್ಟಾರೆ ಸ್ಥಾನಗಳ ಸಂಖ್ಯೆ ಏರುಪೇರಾಗುವ ನಿರೀಕ್ಷೆಯೂ ವ್ಯಕ್ತವಾಗಿದೆ. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದತಿಯ ನಂತರ ನಡೆದ ಮೊದಲ ವಿಧಾನಸಭೆ ಚುನಾವಣೆಗಳು ಇವು. ಎರಡೂ ರಾಜ್ಯಗಳ ಫಲಿತಾಂಶ ಮುಂದಿನ ಹಲವು ಚುನಾವಣೆಗಳಿಗೆ ರಾಜಕೀಯ ಪಕ್ಷಗಳ ಕಾರ್ಯತಂತ್ರ ನಿರ್ಧರಿಸಲಿದೆ. ಯಾವ ರಾಜ್ಯದಲ್ಲಿ ಯಾರು ಗೆಲ್ಲುತ್ತಾರೆ ಅನ್ನೋದು ಭಾರೀ ಕುತೂಕಲ ಕೆರಳಿಸಿದೆ.

ಎರಡು ರಾಜ್ಯಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಗ್ಗೆ 8 ಗಂಟೆಗೆ ಆರಂಭಗೊಳ್ಳಲಿದೆ. ಸಂಜೆ 5 ಗಂಟೆಯ ಸುಮಾರಿಗೆ ಅಂತಿಮ ಫಲಿತಾಂಶವನ್ನು ಚುನಾವಣಾ ಆಯೋಗ ಘೋಷಣೆ ಮಾಡಲಿದೆ. ಆದಾಗ್ಯೂ, ಯಾರು ಗೆದ್ದಿದ್ದಾರೆ, ಯಾರು ಪರಾಭವಗೊಂಡಿದ್ದಾರೆ ಎಂಬ ಮಾಹಿತಿ ಮಧ್ಯಾಹ್ನದೊಳಗೆ ತಿಳಿದರೂ, ಅಂತಿಮ ಘೋಷಣೆಯನ್ನು ಆಯೋಗ ಮಾಡಲಿದೆ.

ಎರಡು ರಾಜ್ಯಗಳಲ್ಲಿ ಅಕ್ಟೋಬರ್ 21ರಂದು ನಡೆದ ಮತದಾನದಲ್ಲಿ ಈ ಬಾರಿ ಮತದಾರರು ನೀರಸ ಪ್ರತಿಕ್ರಿಯೆ ತೋರಿದ್ದರು. ಮಹಾರಾಷ್ಟ್ರದಲ್ಲಿ ಶೇ.60.05 ಮತದಾನವಾಗಿದೆ. 2014ರಲ್ಲಿ ನಡೆದ ಚುನಾವಣೆಯಲ್ಲಿ ಶೇ.63.08 ಮತದಾನವಾಗಿತ್ತು. ಕಳೆದ ಬಾರಿಗೆ ಹೋಲಿಕೆ ಮಾಡಿದ್ದಲ್ಲಿ ಈ ಬಾರಿ ಶೇ.03ರಷ್ಟು ಕಡಿಮೆ ಮತದಾನವಾಗಿದೆ.

ಹರಿಯಾಣದಲ್ಲಿ ಶೇ.65.05ನಷ್ಟು ಮತದಾನವಾಗಿತ್ತು. ಕಳೆದ ಬಾರಿ ಶೇ.76.54 ರಷ್ಟು ಮತ ಚಲಾವಣೆಯಾಗಿತ್ತು. ಅಂದರೆ ಕಳೆದ ಬಾರಿಗೂ ಈ ಬಾರಿಗೂ ಬರೋಬ್ಬರಿ ಶೇ.11.50ರಷ್ಟು ಕಡಿಮೆ ಮತದಾನವಾಗಿದೆ.

ಮತದಾನ ಮುಕ್ತಾಯವಾದ ಬಳಿಕ ವಿವಿಧ ಮಾಧ್ಯಮ ಸಂಸ್ಥೆಗಳು ಪ್ರಕಟಿಸಿದ ಮತಗಟ್ಟೆ ಸಮೀಕ್ಷೆಯಲ್ಲಿ ಎರಡು ರಾಜ್ಯಗಳಲ್ಲಿ ಬಿಜೆಪಿ ಪ್ರಚಂಡ ಜಯಭೇರಿ ಬಾರಿಸಿದೆ. ಎರಡು ರಾಜ್ಯಗಳಲ್ಲಿ ಪ್ರಸ್ತುತ ಬಿಜೆಪಿ ಸರ್ಕಾರವೇ ಇದ್ದು, ಮತ್ತೆ ಸರ್ಕಾರ ರಚಿಸಲಿದೆ ಎಂದು ಎಲ್ಲ ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಆ ಎಲ್ಲ ಸಮೀಕ್ಷೆಯ ಭವಿಷ್ಯಗಳು ನಿಜವಾಗಲಿವೆಯಾ ಎಂಬುದು ಇಂದು ಬಹಿರಂಗವಾಗಲಿದೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಯೂ 243 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಮತ್ತು ಎನ್​ಸಿಪಿ ಮೈತ್ರಿ 41 ಸ್ಥಾನಗಳಲ್ಲಷ್ಟೇ ಗೆಲುವು ಪಡೆಯಲಿದೆ. ಹಾಗೂ ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಗ್ಹಾಡಿ ಮತ್ತು ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷಗಳು 04 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ಐಪಿಎಸ್​ಒಎಸ್​ಯ ಮತಗಟ್ಟೆ ಸಮೀಕ್ಷೆ ಭವಿಷ್ಯ ನುಡಿದಿದೆ. ಹಿಂದಿನ ಚುನಾವಣೆಯಲ್ಲಿ 15 ಸ್ಥಾನ ಗಳಿಸಿದ್ದ ಕಾಂಗ್ರೆಸ್ ಪಕ್ಷ ಈ ಬಾರಿ 10 ಸ್ಥಾನಕ್ಕೆ ತೃಪ್ತಿ ಪಡಬೇಕಾಗಬಹುದು. 2009ರಲ್ಲಿ 40 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ ಪಕ್ಷದ ಬಲ ಸತತ 2 ಚುನಾವಣೆಯಲ್ಲೂ ಕುಸಿಯಲಿದೆ ಎಂದು ಸಮೀಕ್ಷೆ ಹೇಳಿದೆ.

90 ಸದಸ್ಯ ಬಲದ ಹರಿಯಾಣದಲ್ಲಿ ಸ್ಪರ್ಧೆ ಮಾಡಿರುವ ಪಕ್ಷಗಳಲ್ಲಿ ಬಿಜೆಪಿ, ಕಾಂಗ್ರೆಸ್, ಇಂಡಿಯನ್ ನ್ಯಾಷನಲ್ ಲೋಕದಳ ಮತ್ತು ಜನನಾಯಕ್ ಜನತಾ ಪಕ್ಷ ಪ್ರಮುಖ ಪಕ್ಷಗಳಾಗಿವೆ.  ಸಮೀಕ್ಷೆ ಪ್ರಕಾರ 90 ಸದಸ್ಯ ಸ್ಥಾನಗಳ ಪೈಕಿ ಬಿಜೆಪಿಯೊಂದೇ 75 ಸ್ಥಾನ ಪಡೆದುಕೊಳ್ಳಬಹುದು ಎಂದು ಹೇಳಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ 47 ಕ್ಷೇತ್ರಗಳಲ್ಲಿ ಜಯಿಸಿ ಅಧಿಕಾರ ಹಿಡಿದಿತ್ತು. ಈ ಬಾರಿ ಖಟ್ಟರ್ ಸರ್ಕಾರ ಇನ್ನೂ ಹೆಚ್ಚು ಜನಮನ್ನಣೆ ಗಳಿಸಲಿರುವುದು ಈ ಮತ ಗಟ್ಟೆ ಸಮೀಕ್ಷೆಯಿಂದ ಸುಳಿವು ಸಿಕ್ಕಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights