ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನ ಸಭಾ ಚುನಾವಣೆ ದಿನಾಂಕ ಘೋಷಣೆ….

ಕೇಂದ್ರ ಚುನಾವಣಾ ಆಯೋಗ ಇಂದು ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನ ಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದು, ಉಭಯ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಕೇಂದ್ರ ಚುನಾವಣಾ ಆಯುಕ್ತ ಸುನೀಲ್‌ ಅರೋರಾ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಅಕ್ಟೋಬರ್‌ 21 ಕ್ಕೆ ಮತದಾನ ನಡೆಯಲಿದೆ. ಅಕ್ಟೋಬರ್‌ 24 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಉಭಯ ರಾಜ್ಯಗಳಲ್ಲೂ ಚುನಾವಣಾ ನೀತಿಸಂಹಿತೆ ಇಂದಿನಿಂದಲೇ ಜಾರಿಗೆ ಬಂದಿದೆ. ಮಹಾರಾಷ್ಟ್ರ ವಿಧಾನಸಭೆಯ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನ ಸಭಾ ಅವಧಿ ನವೆಂಬರ್ 2ಕ್ಕೆ ಪೂರ್ಣಗೊಳ್ಳಲಿದೆ.

ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳು ಪ್ರಚಾರಕ್ಕಾಗಿ ಪ್ಲಾಸ್ಟಿಕ್‌ ಸಾಮಗ್ರಿಗಳ ಬಳಸುವುದನ್ನು ನಿಷೇಧಿಸಲಾಗಿದ್ದು, ಪ್ರತಿ ಅಭ್ಯರ್ಥಿಗೆ ಚುನಾವಣಾ ವೆಚ್ಚ 28 ಲಕ್ಷ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ವೇಳೆ ತಮ್ಮ ವಿರುದ್ದ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳ ಮಾಹಿತಿ ನೀಡುವುದು ಕಡ್ಡಾಯವಾಗಿದ್ದು, ನಾಮಪತ್ರದಲ್ಲಿ ಯಾವುದೇ ಕಾಲಂಗಳನ್ನು ಖಾಲಿ ಬಿಡುವಂತಿಲ್ಲ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights