ರಾಜ್ಯದ ನೂತನ ಉಪಲೋಕಾಯುಕ್ತರಾಗಿ ನ್ಯಾ. ಬಿ.ಎಸ್. ಪಾಟೀಲ್ ನೇಮಕ..

 ರಾಜ್ಯದ ನೂತನ ಉಪಲೋಕಾಯುಕ್ತರನ್ನಾಗಿ ನ್ಯಾ. ಬಿ.ಎಸ್‌.ಪಾಟೀಲ್‌ ಅವರನ್ನು ನೇಮಿಸಲಾಗಿದೆ. ಈ ನೇಮಕದ ಕಡತಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಗುರುವಾರ ಸಂಜೆ 5 ಗಂಟೆಗೆ ರಾಜಭವನದಲ್ಲಿಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಸಿಎಂ ಯಡಿಯೂರಪ್ಪ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.

ಪಾಟೀಲ್ ಅವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಿದ ಕಡತವನ್ನು ರಾಜ್ಯಪಾಲರ ಅಂಕಿತಕ್ಕೆ ರಾಜ್ಯ ಸರ್ಕಾರ ಕಳಿಸಿಕೊಟ್ಟಿತ್ತು. ಇಂತಹ ಕಡತಕ್ಕೆ ಸಹಿ ಹಾಕಿರುವ ರಾಜ್ಯಪಾಲರು, ಉಪ ಲೋಕಾಯುಕ್ತರ ನೇಮಕಮಾಡಿ ಆದೇಶ ಹೊರಡಿಸಿದ್ದಾರೆ.

ಉಪ ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಸುಭಾಷ್.ಬಿ ಅಡಿ ನಿವೃತ್ತಿಯಿಂದ ತೆರವಾಗಿದ್ದು, ಹುದ್ದೆ ಭರ್ತಿ ಮಾಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಹುದ್ದೆಗೆ ಇದೀಗ ರಾಜ್ಯ ಸರ್ಕಾರ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರನ್ನು ನೇಮಕಮಾಡಿದೆ.

ನ್ಯಾ.ಬಿ.ಎಸ್. ಪಾಟೀಲ್ ಅವರು 14 ವರ್ಷ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಅದಕ್ಕೂ ಮುನ್ನ ಅವರು 20 ವರ್ಷಗಳ ಕಾಲ ವಕೀಲರಾಗಿದ್ದರು. ಉಪ ಲೋಕಾಯುಕ್ತರಾಗಿ ನೇಮಕಗೊಂಡಿರುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಇಂದು ಸಂಜೆ 5 ಗಂಟೆಗೆ ರಾಜಭವನದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಪ್ರಮಾಣವಚನ ಸ್ಪೀಕರಿಸಲಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights