ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಯಾಂಟೀನ್ ತೆರೆಯಲು ಆರೋಗ್ಯ ಸಚಿವರ ಚಿಂತನೆ…

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲವೇ ದಿನಗಳಲ್ಲಿ ಊಟದ ವ್ಯವಸ್ಥೆ ಮಾಡಲು ಕ್ಯಾಂಟೀನ್ ತೆರೆಯಲು ಚಿಂತನೆ ಮಾಡಲಾಗುತ್ತಿದೆ. ಈಗಾಗಲೇ ತಾಯಂದಿರಿಗೆ ನೀಡಲಾಗುತ್ತಿದ್ದ ಮಡಿಲು ಕಿಟ್ ಅನ್ನು, ಮತ್ತೆ ಪುನರ್ ಪ್ರಾರಂಭಿಸಿ, ನೀಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಬಿ ಶ್ರೀರಾಮುಲು, ಉಪ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಕ್ಕಿಂತ ಪಕ್ಷದ ತೀರ್ಮಾನಕ್ಕೆ ಬದ್ದನಾಗಿದ್ದೇನೆ. ಈಗಾಗಲೇ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ನಾನು, ರಾಜ್ಯದ ಜನತೆಗೆ ಆರೋಗ್ಯ ವಿಚಾರದಲ್ಲಿ ಸೂಕ್ತ ಕ್ರಮ ವಹಿಸಲು ದುಡಿಯುತ್ತೇನೆ ಎಂದು ಹೇಳಿದರು.

ಇನ್ನೂ ಇದೇ ವೇಳೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ವ್ಯವಸ್ಥೆಗಾಗಿ ಕ್ಯಾಂಟೀನ್ ಪ್ರಾರಂಭಿಸುವ ಉದ್ದೇಶ ಹೊಂದಲಾಗಿದೆ.ಇದಲ್ಲದೇ ಈಗಾಗಲೇ ನೀಡಲಾಗುತ್ತಿದ್ದ ಮಡಿಲು ಕಿಟ್ ನಿಲ್ಲಿಸಲ್ಪಟ್ಟಿತ್ತು. ಇದನ್ನು ಮತ್ತೆ ನೀಡಲು ರಾಜ್ಯದ ಜನರು ಒತ್ತಾಯಿಸಿದ್ದಾರೆ. ಹೀಗಾಗಿ ಪುನರ್ ಪ್ರಾರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಒಟ್ಟಾರೆಯಾಗಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶೀಘ್ರದಲ್ಲಿಯೇ ಕ್ಯಾಂಟೀನ್ ಪ್ರಾರಂಭವಾಗಲಿದೆ. ಈ ಮೂಲಕ ರೋಗಿಗಳಿಗ ಊಟದ ವ್ಯವಸ್ಥೆ ಆಸ್ಪತ್ರೆಯಲ್ಲೇ ಆಗಲಿದೆ. ಇದರ ಜೊತೆಗೆ ನಿಲ್ಲಿಸಲಾಗಿದ್ದ ಮಡಿಲು ಕಿಟ್ ಕೂಡ ಶೀಘ್ರದಲ್ಲಿಯೇ ಪ್ರಾರಂಭಗೊಳ್ಳಲಿದ್ದು, ಈ ಮೂಲಕ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights