ಶುಕ್ರವಾರ ಸುಪ್ರಿಂ ತೀರ್ಪು ಸಾಧ್ಯತೆ, ಸುಪ್ರೀಂ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿರ್ಧಾರ

ರಾಜ್ಯದ ರಾಜಕೀಯ ದಿಕ್ಕನ್ನು ಬದಲಿಸಬಲ್ಲ ಮಹತ್ವದ ತೀರ್ಪು ಸುಪ್ರೀಂ ಕೋರ್ಟಿನಲ್ಲಿ ಪ್ರಕಟವಾಗುವ ಸಾಧ್ಯತೆಯ ಬೆನ್ನಲ್ಲಿಯೇ ಅನರ್ಹ ಶಾಸಕರು ಸೋಮವಾರ ಬೆಂಗಳೂರಿನಲ್ಲಿ ಖಾಸಗಿ ಹೋಟೆಲಿನಲ್ಲಿ ಸಭೆ ಸೇರಿ ತಮ್ಮ ದುಗುಡ ಹಂಚಿಕೊಂಡಿದ್ದಾರೆ.

ರಾಜೀನಾಮೆ ನೀಡಿದ ಶಾಸಕರನ್ನು ಅನರ್ಹಗೊಳಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ಕೊನೆಗೊಂಡಿದ್ದು ಕಾಯ್ದಿರಿಸಲಾದ ತೀರ್ಪು ಮಂಗಳವಾರ ಪ್ರಕಟವಾಗುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಅನರ್ಹರಾಗಿರುವ ಶಾಸಕರಲ್ಲಿ ಒಂದು ರೀತಿಯ ಆತಂಕ ಮನೆ ಮಾಡಿದ್ದು ತೀರ್ಪು ತಮ್ಮ ಪರ ಅಥವ ವಿರುದ್ಧವಾಗಿ ಬಂದಲ್ಲಿ ಮುಂದೆ ಏನು ಮಾಡಬೇಕು ಎಂಬುದರ ಕುರಿತು ವಿಸ್ತೃತವಾದ ಚರ್ಚೆ ನಡೆಸಿದರು ಎನ್ನಲಾಗಿದೆ.

ಈ ಮಧ್ಯೆ ತಮ್ಮ ಪರವಾಗಿ ಮಾಯತನಾಡುತ್ತ ಬಿಜೆಪಿ ಸಭೆಯಲ್ಲಿ ಮುಖಯಮಂತ್ರಿ ಯಡಿಯೂರಪ್ಪ ಆಡಿದ ಮಾತು ಸೃಷ್ಟಿಸಿರುವ ವಿವಾದ ಮತ್ತು ಸುಪ್ರೀಂ ಕೋರ್ಟ್‌ ಸಹ ಇದನ್ನು ಪರಿಗಣಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅನರ್ಹ ಶಾಸಕರಲ್ಲಿ ಆತಂಕ ಹೆಚ್ಚಾಗಿದೆ ಎಂದು ತಿಳಿದುಬಂದಿದೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights