ಸೆ.8ರಂದು ಬೆಂಗಳೂರು ಬಂಟರ ಹೊಟೇಲ್ ಮಾಲೀಕರ ಸಮ್ಮಿಲನ…

ಬೆಂಗಳೂರು ಬಂಟರ ಹೊಟೇಲ್ ಮಾಲೀಕರ ಸಂಘವು ಸೆಪ್ಟಂಬರ್ 8 2019ರಂದು ಬೆಂಗಳೂರಿನ ಬಂಟರ ಸಂಘದಲ್ಲಿ ಬಂಟರಾತಿಥ್ಯ ಎಂಬ ಬಂಟರ ಹೊಟೇಲಿಗರ ಪ್ರಥಮ ಸಮ್ಮಿಲನ ಕಾರ್ಯಕ್ರಮವನ್ನು ಆಯೋಜಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ಬಂಟರ ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಮಧುಕರ್ ಶೆಟ್ಟಿ, ಬಂಟರಾತಿಥ್ಯ ಅನ್ನೋದು ವಿಶಿಷ್ಟ ಕಾರ್ಯಕ್ರಮವಾಗಿದೆ. ಇಲ್ಲಿ ಹೊಟೇಲ್ ಉದ್ಯಮದ ಬಗ್ಗೆ ಯುವ ಉದ್ಯಮಿಗಳಿಗೆ ಮಾರ್ಗದರ್ಶನವನ್ನು ನೀಡಲಾಗುತ್ತದೆ. ಈ ಕಾರ್ಯಕ್ರಮವು ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಸೆಪ್ಟಂಬರ್ 8, ಭಾನುವಾರ ಬೆಳಗ್ಗೆ 10.30ಕ್ಕೆ ಮಾಜಿ ಸಂಸದರಾದ ಕೆ. ಜಯ ಪ್ರಕಾಶ್ ಶೆಟ್ಟಿಯವರು ಉದ್ಘಾಟಿಸಲಿದ್ದಾರೆ. ಶಾಸಕ ಹಾಗೂ ಮಾಜಿ ಸಚಿವ ಎಂ. ಕೃಷ್ಣಪ್ಪ ಹಾಗೂ ಅಪರ ನಿರ್ದೇಶಕರು ಹಾಗೂ ಸಿಎಓ ಜಲಾನಯನ ಅಭಿವೃದ್ದಿಯ ಇಲಾಖೆಯ ಅಜಿತ್ ಕುಮಾರ್ ಹೆಗ್ಡೆ ಶಾನಡಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ರು.

ಬಳಿಕ ಯುವ ಉದ್ಯಮಿಗಳಿಗೆ ಹೊಟೇಲ್ ಉದ್ಯಮಗಳ ಬಗ್ಗೆ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಹಾಗೇ ಕುರುಕ್ಷೇತ್ರಕ್ಕೊಂದು ಆಯೋಗ ಅನ್ನೋ ಯಕ್ಷ ಪ್ರಯೋಗ ಕಾರ್ಯಕ್ರಮ ಹಾಗೂ ಎಲ್ಲಾ ಸಮಾ ಅತ್ತು ಅನ್ನೋ ಕುಂದಾಪ್ರ ಕನ್ನಡ ನಗೆ ನಾಟಕವೂ ನಡೆಯಲಿದೆ. ಇಳಿಸಂಜೆಯಲ್ಲಿ ಸಂತೋಷ್ ಕುಮಾರ್ ಹೆಗ್ಡೆ ಮತ್ತು ತಂಡದವರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ ಎಂದು ಬಂಟರಾತಿಥ್ಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ರು.

ಸಂಜೆ 5 ಗಂಟೆಗೆ ಬಂಟರಾತಿಥ್ಯ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ. ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಸನ್ಮಾನಿಸಲಾಗುವುದು. ಇನ್ನು ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ, ಸಚಿವರಾದ ಡಾ. ಸಿ. ಅಶ್ವತ್ಥ ನಾರಾಯಣ, ವಿ.ಸೋಮಣ್ಣ, ಸಿ.ಟಿ. ರವಿ, ಎಂಆರ್‍ಜಿ ಗ್ರೂಪ್‍ನ ಚೇರ್‍ಮೆನ್ ಕೆ. ಪ್ರಕಾಶ್ ಶೆಟ್ಟಿ ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಮಧುಕರ್ ಶೆಟ್ಟಿ ತಿಳಿಸಿದ್ರು.

ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಬಂಟರ ಹೊಟೇಲ್ ಮಾಲೀಕರ ಸಂಘದ ಗೌರವಾಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಬೆಂಗಳೂರು ಬಂಟರ ಹೊಟೇಲ್ ಮಾಲೀಕರ ಸಂಘದ ಗೌರವ ಕಾರ್ಯದರ್ಶಿ ಸಂತೋಷ್ ಕುಮಾರ್ ಶೆಟ್ಟಿ, ಪ್ರಧಾನ ಸಂಚಾಲಕರಾದ ಜಿ.ಕೆ.ಶೆಟ್ಟಿ, ಸಂಚಾಲಕರಾದ ಕೊರ್ಗಿ ಗೋಪಾಲ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights