ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಆಸ್ಪತ್ರೆಗೆ ದಾಖಲು…!

ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ 2 ಗಂಟೆಯಿಂದ ತುರ್ತು ಘಟನೆದಲ್ಲಿ ಅವರಿಗೆ ಚಿಕಿತತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. 90 ರ ಲತಾ ಮಂಗೇಶ್ಕರ್ ಅವರು ವಯೋ ಸಹಜ ಚಿಕಿತ್ಸೆಯನ್ನು ಆಗಾಗ ಪಡೆಯುತ್ತಿದ್ದರು. ಸಂಬಂಧಿಕರು ಹಾಗೂ ಕುಟುಂಬಸ್ಥರು ಆಸ್ಪತ್ರೆಯಲ್ಲಿ ಉಳಿದುಕೊಂಡಿರುವ ಮಾಹಿತಿ ಲಭ್ಯವಾಗಿದೆ.

36 ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿ ಸಂಗೀತ ಕ್ಷೇತ್ರಕ್ಕೆ ಮಹತ್ತರ ಕೊಡುಗೆ ನೀಡಿದ ಭಾರತ ಕಂಡ ಅತ್ಯಾದ್ಬುತ ಗಾಯಕಿ. ಮೊನ್ನೆ ಮೊನ್ನೆ ಟ್ವೀಟ್ ನಲ್ಲಿ ಆಕ್ಟಿವ್ ಆಗಿದ್ದರು. ಸೋಷಿಯಲ್ಲ ಮೀಡಿಯಾದಲ್ಲಿ ಕೆಲವು ಪೋಸ್ಟ್ ಗಳನ್ನು ಗಮನಿಸಲಾಗಿತ್ತು. ಮೊನ್ನೆಯಷ್ಟೇ ಅವರು ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು.

ಸದ್ಯ ಬೆಳಂಬೆಳಿಗ್ಗೆ ಲತಾ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಅಭಿಮಾನಿಗಳಲ್ಲಿ ಆತಂಕ ಸೃಷ್ಟಿ ಮಾಡಿದೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights