ರೈಲ್ವೇ ನಿಲ್ದಾಣದಲ್ಲಿ ನಿಂತಿದ್ದ ಬೋಗಿಯಲ್ಲಿ ಬೆಂಕಿ : ಭಯಗೊಂಡು ಓಡಿದ ಜನ
ಚಂಡೀಗಢ-ಕೊಚುವೆಲಿ ಎಕ್ಸ್ ಪ್ರೆಸ್ ರೈಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತುಕೊಂಡು ಉರಿದ ಘಟನೆ ನವದೆಹಲಿಯ ನಿಲ್ದಾಣದ ಎರಡನೇ ಪ್ಲಾಟ್ಫಾರಂನಲ್ಲಿ ನಡೆದಿದೆ.
ಎಕ್ಸ್ ಪ್ರೆಸ್ ರೈಲಿನ ಪವರ್ ಕಾರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಂದು ಮಧ್ಯಾಹ್ನ ರೈಲಿನ ಪವರ್ ಕಾರಿನ ಬೋಗಿಯಲ್ಲಿ ಹೊಗೆ ಕಾಣಿಸಿಕೊಂಡಿತ್ತು. ನೋಡ ನೋಡುತ್ತಲೇ ಬೆಂಕಿ ಆವರಿಸಿದ್ದರಿಂದ ಎರಡು ಬೋಗಿಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ ಎಂದು ವರದಿಯಾಗಿದೆ. ಬೋಗಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಭಯಗೊಂಡ ನಿಲ್ದಾಣದಿಂದ ಹೊರಕ್ಕೆ ಓಡಿ ಬಂದಿದ್ದಾರೆ.
ತಕ್ಷಣವೇ ಕಾರ್ಯನಿರತರಾದ ಸಿಬ್ಬಂದಿ ಪ್ರಯಾಣಿಕರು ನಿಲ್ದಾಣದಿಂದ ಹೊರ ಕಳುಹಿಸಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.