ಮುಂಬೈ ಮಾಲ್ನಲ್ಲಿ ಬೆಂಕಿ ಅವಘಡ: 3,500 ಜನರ ಸ್ಥಳಾಂತರ!
ಮುಂಬೈನ ಮಾಲ್ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಈ ವೇಳೆ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಗಾಯಕೊಂಡಿದ್ದು, ಪಕ್ಕದ ಕಟ್ಟದಲ್ಲಿದ್ದ 3,500 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ಮಾಲ್ನಲ್ಲಿ ಬೆಂಕಿ ಕಾಣಿಸಿಕೊಂಡ ಬಳಿಕ ಮಾಲ್ನಲ್ಲಿದ್ದ ಸುಮಾರು 300 ಜನರನ್ನು ರಕ್ಷಿಸಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ಏನು ಎಂದು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಮತ್ತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಾಲ್ನಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯ ಜ್ವಾಲೆಯನ್ನು ನಂದಿಸಲು 10 ಅಗ್ನಿಶಾಮಕ ವಾಹನಗಳು ಮತ್ತು ಏಳು ಜೆಟ್ಟಿಗಳು ಸ್ಥಳಕ್ಕೆ ಧಾವಿಸಿದ್ದವು. ನಿರಂತರವಾಗಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದವು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದುವರೆಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ‘ಭಾರತವನ್ನು ನೋಡಿ, ಅದು ಹೊಲಸು, ಅಲ್ಲಿನ ಗಾಳಿಯು ಹೊಲಸು’: ಡೊನಾಲ್ಡ್ ಟ್ರಂಪ್