ಅಕ್ರಮ ಸಂಪತ್ತಿನ ಬೇಟೆ : ರಾಜ್ಯದಲ್ಲಿಂದು 7 ಕಡೆ ಎಸಿಬಿ ದಾಳಿ : ಭ್ರಷ್ಟ ಅಧಿಕಾರಿಗೆ ಬಿಗ್ ಶಾಕ್!

ಬೆಳ್ಳಂಬೆಳಗ್ಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಎಸಿಬಿ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. ರಾಜ್ಯದ 7 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ಮಾಡಿದೆ. 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಅಕ್ರಮ ಸಂಪತ್ತಿಗಾಗಿ ಬೇಟೆಯಾಡುತ್ತಿದೆ.

ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿ, ಧಾರವಾಡ ಅರಣ್ಯ ಇಲಾಖೆಯ ಅಧಿಕಾರಿ, ಹುಬ್ಬಳ್ಳಿಯಲ್ಲಿ ವಾಸವಾಗಿರುವ ಎಕ್ಸಿಕ್ಯೂಟಿವ್ ಇಂಜಿನೀಯರ್ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಆಕ್ರಮವಾಗಿ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಹುಬ್ಬಳ್ಳಿಯ ರಾಜೀವ್ ಗಾಂಧಿ ನಗರದ ಮನೆ ಸೇರಿದಂತೆ ನಾಲ್ಕು ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಹುಬ್ಬಳ್ಳಿಯಲ್ಲಿ ವಾಸವಾಗಿರುವ ಎಕ್ಸಿಕ್ಯೂಟಿವ್ ಇಂಜಿನೀಯರ್ ದೇವರಾಜ್ ಶಿಗ್ಗಾಂವಿ ಎಂಬವರ ಮನೆ ಮೇಲೆ ದಾಳಿ ನಡೆಸಿರುವ ೆಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದೇವರಾಜ್ ಶಿಗ್ಗಾಂವ್ ಧಾರವಾಡ ನೀರಾವರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇಂದು ಮೂರು ವಾಹನಗಳೊಂದಿಗೆ ಆಗಮಿಸಿರುವ ಎಸಿಬಿ ತಂಡ ರಾಜೀವ್ ಗಾಂಧಿ ನಗರ, ಬಾಲಾಜಿ, ನಗರ, ಕೋಟಿಲಿಂಗ ನಗರ ಸೇರಿದಂತೆ ನಾಲ್ಕುಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಮೂರು ತಂಡಗಳಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಮನೆಯ ಪ್ರತಿ ಕಡೆಯೂ ತಪಾಸಣೆ ಮಾಡುತ್ತಿದ್ದಾರೆ. ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಎಸಿಬಿ ದಾಳಿ ಆರಂಭವಾದಾಗಿನಿಂದ ಮನೆಯ ಯಾವುದೇ ಸದಸ್ಯರನ್ನ ಹೊರಗೆ ಬಿಡದೇ ಹಲವು ದಾಖಲಾತಿಗಳನ್ನು ಕೇಳಿ ಪಡೆದು ಪರಿಶೀಲನೆ ಮುಂದುವರಿಸಿದ್ದಾರೆ.

ಕೋಲಾರ ಜಿಲ್ಲ ಆರೋಗ್ಯಾಧಿಕಾರಿಗೆ ಎಸಿಬಿ ಶಾಕ್ ನೀಡಿದೆ. ಡಿಹೆಚ್ಓ ಡಾ, ವಿಜಯ್ ಕುಮಾರ್ ಅವರ ಮನೆ, ಕಚೇರಿ ಮೇಲೆ ದಾಳಿ ಮಾಡಿದ್ಧಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಚಿತ್ರದುರ್ಗದಲ್ಲಿ ಎಸಿಬಿ ಅಧಿಕಾರಿಗಳು ಧಾರವಾಡ ಅರಣ್ಯ ಇಲಾಖೆಯ ಅಧಿಕಾರಿ ಶ್ರೀನಿವಾಸ್ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಜೊತೆಗೆ ವಿಮ್ಸ್ ಆಸ್ಪತ್ರೆಯ ಮಾಜಿ ನಿರ್ದೇಶ ಶ್ರೀನಿವಾಸ್, ಕೊಪ್ಪಳದ ಕಿಮ್ಸ್ ನ ಔಷಧಶಾಸ್ತ್ರದ ಮುಖ್ಯಸ್ಥರು ಇವರ ಮನೆ ಮೇಲೂ ಎಸಿಬಿ ಇಂದು ದಾಳಿ ಮಾಡಿದೆ. ಇನ್ನೂ ಜಂಟಿ ನಿಬಂಧಕ ಪಾಂಡುರಂಗ ಗರಗ್ ಅವರ ವಿಜನಗರದ ಮನೆ ಮೇಲೆ ಎಸಿಬಿ ದಾಳಿ ಮಾಡಿದ್ದು ಬಗಿದಷ್ಟು ಬಯಲಾಗುತ್ತಿದೆ ಅಕ್ರಮ ಸಂಪತ್ತು ಬಯಲಾಗುತ್ತಿದೆ. ಬೆಳ್ಳಿ, ಚಿನ್ನ, ಒಡವೆಗಳು ಸೇರಿದಂತೆ ಅಪಾರ ಸಂಪತ್ತು ಪತ್ತೆಯಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights