ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನವಜ್ಯೋತ್ ಸಿಂಗ್ ಸಿಧು ರಾಜೀನಾಮೆ!
ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನವಜ್ಯೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ.
ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನವಜ್ಯೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ಆದಾಗ್ಯೂ, ಅವರು ಕಾಂಗ್ರೆಸ್ ಪಕ್ಷದ ಸೇವೆಯನ್ನು ಮುಂದುವರಿಸುತ್ತಾರೆ ಎಂದು ನವಜ್ಯೋತ್ ಸಿಂಗ್ ಸಿಧು ಅವರು ಟ್ವಿಟ್ಟರ್ ನಲ್ಲಿ ಘೋಷಣೆ ಮಾಡಿದ್ದಾರೆ. ಟ್ವೀಟರ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದ ಪತ್ರವನ್ನು ಪೋಸ್ಟ್ ಮಾಡಿದ್ದಾರೆ.
ಪತ್ರದಲ್ಲಿ ” ಪಂಜಾಬ್ನ ಭವಿಷ್ಯ ಮತ್ತು ಪಂಜಾಬ್ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ, ನಾನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಬರೆದಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ನವಜ್ಯೋತ್ ಸಿಂಗ್ ಸಿಧು ಹೆಸರು ಕೂಡಾ ಕೇಳಿ ಬಂದಿತ್ತು. ಆದರೆ, ಚರಣ್ಜಿತ್ ಸಿಂಗ್ ಚನ್ನಿ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದು, ಸಂಪುಟ ವಿಸ್ತರಣೆ ಮಾಡಿದ್ದಾರೆ.
— Navjot Singh Sidhu (@sherryontopp) September 28, 2021
ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಿಧು ಪಿತೂರಿ ನಡೆಸಿದ್ದರು ಎಂಬ ಸುದ್ದಿ ಹಬ್ಬಿತ್ತು. ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಅಮರೀಂದರ್ ಅವರು ಸಿಧು ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಸಿಎಂ ಸ್ಥಾನಕ್ಕೆ ಸಿಧು ಸೂಕ್ತರಲ್ಲ, ಪಾಕಿಸ್ತಾನಿಗಳ ಜೊತೆ ಮೈತ್ರಿ ಹೊಂದಿದ್ದಾರೆ, ಪಂಜಾಬ್ ರಾಜ್ಯಕ್ಕೆ ಸಿಧು ಸಿಎಂ ಆದರೆ ಅದು ದೊಡ್ಡ ಕಳಂಕ ಎಂದಿದ್ದರು.
ಹೀಗೆ ನವಜ್ಯೋತ್ ಸಿಂಗ್ ಸಿಧು ಮತ್ತು ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ನಡುವಿನ ಅಂತಃಕಲಹದಿಂದಾಗಿ ಈ ಬೆಳವಣಿಗೆ ನಡೆದಿದೆ.